ಹಾವೇರಿ:
ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಿಸನಹಳ್ಳಿ ಗ್ರಾಮದ ಬಳಿ ನಡೆದಿದೆ.
ನಾಗರಾಜ (37) ಇಂದುಧರ ಪಾಟೀಲ್ (38) ಮೃತರು. ಅಪಘಾತದಲ್ಲಿ ಪ್ರವೀಣ್ ಕಲಾಲ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಅವರನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಸಾಗುತ್ತಿದ್ದ ಕಾರಿಗೆ ಅತಿವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮತ್ತೊಂದು ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.
ಶಿಗ್ಗಾವಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ