ಬೆಂಗಳೂರು:
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ಹಮ್ಮಿಕೊಂಡಿರುವ ‘ಮೇರಾ ಪರಿವಾರ್, ಬಿಜೆಪಿ ಪರಿವಾರ್’ ಅಭಿಯಾನವು ಇಂದಿನಿಂದ ಆರಂಭಗೊಂಡಿದೆ ಈ ಅಭಿಯಾನಕ್ಕೆ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಬಿಜೆಪಿಯ ಎಲ್ಲಾ ಕಾರ್ಯಕರ್ತರ ಮನೆಗಳಲ್ಲಿ ಬಿಜೆಪಿ ಲಾಂಛನದ ಸ್ಟಿಕ್ಕರ್ ಅಂಟಿಸುವ ಮೂಲಕ ಮತದಾರರನ್ನು ಪಕ್ಷಕ್ಕೆ ಮತ ಹಾಕಲು ಆಕರ್ಷಿಸುವ ಅಭಿಯಾನ ಇದಾಗಿದ್ದು, ಇದೀಗ ರಾಜ್ಯದಲ್ಲಿಯೂ ಅಭಿಯಾನಕ್ಕೆ ಚಾಲನೆ ಸಿಕ್ಕದೆ, ಕನಿಷ್ಠ 70 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸಿ, ಸ್ಟಿಕ್ಕರ್ ಅಂಟಿಸುವ ಗುರಿ ಹೊಂದಲಾಗಿದೆ. ನಗರದ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ಸ್ಟಿಕ್ಕರ್ ಅಂಟಿಸಿ ಮನೆ ಮೇಲೆ ಬಿಜೆಪಿ ದ್ವಜ ಹಾರಿಸುವ ಮೂಲಕ ‘ನಮ್ಮ ಮನೆ ಬಿಜೆಪಿ ಮನೆ’ಗೆ ಅಧಿಕೃತವಾಗಿ ಚಾಲನೆ ನೀಡಿದರು.