ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬಸವರಾಜ ಹೊರಟ್ಟಿ ಕರೆ

ಬೆಂಗಳೂರು

       ಗುಣಮಟ್ಟದ ಶಿಕ್ಷಣ ನೀಡದಿದ್ದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದರು.

        ಮಕ್ಕಳ ಹಾಜರಾತಿ ಕಡಿಮೆ ಆಗದಂತೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಅಕರ್ಷಿಸಿಬೇಕು ಪೋಷಕರಲ್ಲಿಯೂ ಕೀಳರಮೆ ಹೋಗಲಾಡಿಸಿ ತುರ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿಯಿಲ್ಲದೇ ಶಿಕ್ಷಕರು ಕೆಲಸ ಕಳೆದುಕೊಳ್ಳುವ ದಿನ ದೂರ ಉಳಿದಿಲ್ಲ ಎಂದರು.

       ನಗರದಲ್ಲಿಂದು ಕೆಜಿ ರಸ್ತೆಯ ಶಿಕ್ಷಕರ ಸದನ ಸಭಾಂಗಣದಲ್ಲಿ ಗುರುವಾರ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕ ಪ್ರತಿನಿಧಿಗಳ ರಾಜ್ಯ ಮಟ್ಟದ ಪ್ರಥಮ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿz ಅವÀರು. ಮಕ್ಕಳ ಪ್ರವೇಶ ಮತ್ತು ಪಠ್ಯ ಬೋಧನೆಯಲ್ಲಿ ಆಸಕ್ತಿ ವಹಿಸಿ ಎಂದು ಅವರು ಸಲಹೆ ಮಾಡಿದರು.

        ಕನ್ನಡ, ತಮಿಳು ತೆಲುಗು ಸೇರಿದಂತೆ ಯಾವುದೇ ಭಾಷೆ ಇರಲಿ, ಮೊದಲು ಮಾತೃ ಭಾಷೆಯಲ್ಲಿಯೇ ಮಕ್ಕಳಿಗೆ ಶಿಕ್ಷಣ ದೊರೆಯತರೆ ಮಾತ್ರ ಶೈಕ್ಷಣಿಕ ಪ್ರಗತಿ ಕಾಣಲು ಸಾಧ್ಯ ದೇಶದ 22 ರಾಜ್ಯಗಳ ಪೈಕಿ, ಕರ್ನಾಟಕದಲ್ಲಿ ಶಿಕ್ಷಕರಿಗೆ ಹೆಚ್ಚಿನ ವೇತನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

       ಶಿಕ್ಷಕರಿಗೆ ಮುಂಬಡ್ತಿ ದೊರೆಯಬೇಕು.ಇದರಿಂದ ಹೊಸ ನೇಮಕಾತಿ ಆಗುವ ಜೊತೆಗೆ, ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಬಹುದು ಕ್ಷಕರ ಮುಂಬಡ್ತಿ ಪ್ರಮಾಣ ಶೇಕಡ 50ರಷ್ಟು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

        ಇದಲ್ಲದೇ ಬಡ್ತಿಗಾಗಿ ಇರುವ ಪರೀಕ್ಷೆ ರದ್ದು, ಗುಣಾತ್ಮಕ ಶಿಕ್ಷಕ್ಕಾಗಿ ಎಲ್ಲಾ 6 ವಿಷಯಗಳನ್ನು ಸೃಜಿಸುವುದು.200 ಮಕ್ಕಳಿಗಿಂತ ಹೆಚ್ಚು ದಾಖಲಾತಿ ಹೊಂದಿದ, ಶಾಲೆಗಳಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಸಂಬಂಧವೂ ಚರ್ಚೆ ನಡೆಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

         ಇದೇ ವೇಳೆ ಅವರು ಶಿಕ್ಷಕರ ವರ್ಗಾವಣೆ ನೀತಿ ಜಾರಿಗೆ ಬಂದಿಲ್ಲದಿದ್ದರೆ, ಶಿಕ್ಷಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದವು ಎಂದು ಆತಂಕ ವ್ಯಕ್ತಪಡಿಸಿದರು ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಸ್.ವಾಯ್ ಸೊರಟಿ, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಸೇರಿದಂತೆ ಪ್ರಮುಖರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link