ಉಗ್ರರ ದಾಳಿಗೆ ಪ್ರತೀಕಾರ : ಸರ್ವಪಕ್ಷ ಆರಂಭ!!

ನವದೆಹಲಿ: 

     ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರ ದಾಳಿ ಕುರಿತ ಸಮಗ್ರ ಮಾಹಿತಿ ಹಂಚಿಕೊಳ್ಳಲು ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷಗಳ ಸಭೆ ಕರೆದಿದೆ.

      ಜಮ್ಮು ಕಾಶ್ಮೀರದ ಅವೋಂತಿಪೊರದಲ್ಲಿ ಉಗ್ರರು ನಡೆಸಿದ ದಾಳಿ ಸಂಬಂಧ ಮುಂದಿನ ಹೆಜ್ಜೆಯಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರ ನೇತೃತ್ವದಲ್ಲಿ ಶನಿವಾರ ಸರ್ವ ಪಕ್ಷ ಸಭೆ ಆರಂಭವಾಗಿದೆ.

      ಸರ್ಕಾರ ಕೈಗೊಂಡ ಕ್ರಮಗಳನ್ನು ಎಲ್ಲ ಪಕ್ಷಗಳಿಗೆ ಮನವರಿಕೆ ಮಾಡಿಕೊಡುವ ಮೂಲಕ ಇಡೀ ದೇಶ ಒಂದೇ ದನಿಯಾಗಿ ಈ ದುರ್ಘಟನೆಯನ್ನು ಎದುರಿ ಸಲು ಬದ್ಧವಾಗಿದೆ ಎಂಬುದನ್ನು ತೋರ್ಪಡಿಲು ಈ ಸಭೆ ಕರೆಯಲಾಗಿದೆಎಂದು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

      ಸಂಸತ್‌ನಲ್ಲಿ ನಡೆಯುತ್ತಿರುವ ಸಭೆಗೆ ಆಡಳಿತ ಪಕ್ಷ ಬಿಜೆಪಿ, ಕಾಂಗ್ರೆಸ್‌, ಜೆಡಿಯು, ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‌ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link