ನವದೆಹಲಿ 
ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಭಾರತದ ಮೊದಲ ಸೆಮಿ ಪಾಸ್ಟ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ನಲ್ಲಿ ಇಂದು ಮುಂಜಾನೆ ಕೆಲವು ತಾಂತ್ರಿಕ ದೋಷ ಕಂಡುಬಂದಿದೆ.ಚಲನೆ ಸಂದರ್ಭದಲ್ಲಿ ಚಕ್ರಗಳು ಜಾರಿದ್ದರಿಂದ ಸಂಚಾರದಲ್ಲಿ ವ್ಯತ್ಯಯವುಂಟಾಗಿದ್ದು ಎಂಜಿನಿಯರ್ ಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ವಾರಣಾಸಿಯಿಂದ ದೆಹಲಿಗೆ ಬರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ತುಂಡ್ಲಾ ಜಂಕ್ಷನ್ ನಿಂದ 15 ಕಿಲೋ ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಹಳಿಯಲ್ಲಿ ಹಸುಗಳು ಓಡಾಡುತ್ತಿದ್ದಾಗ ಬ್ರೇಕ್ ಹಾಕಲು ಯತ್ನಿಸಿದಾಗ ಚಕ್ರ ಜಾರಿದ ಘಟನೆ ನಡೆದಿದೆ. ಎಂಜಿನಿಯರ್ ಗಳು ಈ ಬಗ್ಗೆ ತಪಾಸಣೆ ನಡೆಸುತ್ತಾರೆ ಎಂದು ಉತ್ತರ ರೈಲ್ವೆ ವಿಭಾಗದ ಸಿಪಿಆರ್ ಒ ದೀಪಕ್ ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








