ದಾವಣಗೆರೆ:
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಎಂಇಎಸ್ ಕಾನ್ವೆಂಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.19 ರಂದು ಬೆಳಗ್ಗೆ 10 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಅಮೃತ ಸಭಾಭವನದಲ್ಲಿ ಪರೀಕ್ಷೆ ಒಂದು ಹಬ್ಬ ಬನ್ನಿ ಆಚರಿಸೋಣ ಹಾಗೂ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಏರ್ಪಡಿಸಲಾಗಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಇಎಸ್ ಕಾಲೇಜಿನ ಪ್ರಾಂಶುಪಾಲ ಪಿ.ವೆಂಕಟೇಶ್, ಆವರಗೊಳ್ಳದ ಶ್ರೀಓಂಕಾರ ಶಿವಾಚಾರ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಾಗಾರದ ಉದ್ಘಾಟನಾ ಸಮಾರಂಭವನ್ನು ಡಿಡಿಪಿಐ ಸಿ.ಆರ್ ಪರಮೇಶ್ವರಪ್ಪ ಉದ್ಘಾಟಿಸಲಿದ್ದಾರೆ. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಲ್ಲೇಶ್ ಕೆ.ಪಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಹೆಚ್.ಕೆ ಲಿಂಗರಾಜು, ಸೋಮಶೇಖರ ಗೌಡ, ಬಿಸಿ ಸಿದ್ದಪ್ಪ, ಕಿರಣ್ ಕುಮಾರ್ ಸಿದ್ದೆ ಮತ್ತಿತರರು ಆಗಮಿಸಲಿದ್ದಾರೆ. ಸಂಜೆ 4 ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಈ ಕಾರ್ಯಾಗಾರದಲ್ಲಿ 30 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಕೆ.ಆರ್ ಅಜ್ಜಣ್ಣ, ಪ್ರದೀಪ್, ಕೆ.ಎಂ.ರಾಜಶೇಖರ್, ಪ್ರದೀಪ್‍ಕುಮಾರ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
