ಹೊಸದುರ್ಗ:
ಲೋಕಸಭಾ ಚುನಾವಣೆ ಹತ್ತಿರವಿರುವುದರಿಂದ ಜೆಡಿಎಸ್ ಪಕ್ಷ ಗೆಲ್ಲಿಸಲು ಸಂಪೂರ್ಣ ಜವಾಬ್ದಾರಿ ನೀಡಿದರೆÉ ಜಿಲ್ಲಾಧ್ಯಕ್ಷರ ಸಹಾಯದಿಂದ ಸಂಚರಿಸಿ ಗೆಲ್ಲಿಸಲು ಪ್ರಯತ್ನಿಸುತ್ತೇನೆಂದು ಜೆಡಿಎಸ್ ಹಿರಿಯ ಉಪಾಧ್ಯಕ್ಷ ರಾಗಿ ಶಿವಮೂರ್ತಿ ಭರವಸೆ ನೀಡಿದರು.
ಇತ್ತೀಚ್ಚೇಗೆ ಹೊಸದುರ್ಗಕ್ಕೆ ಭೇಟಿ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ವಿಶ್ವನಾಥ್ ನೇತೃತ್ವದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯನ್ನೂದ್ದೇಶಿಸಿ ಮಾತನಾಡಿದರು.
ನಂತರ ಮಾತನಾಡಿದ ಅವರು ತಾಲ್ಲೂಕಿನ ವಿಧಾನಸಭಾ ಚುನವಣಾ ಸಮಯದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಿ ಹೊಸಮುಖವರಾದ ಚಿತ್ರನಟ ಶಶಿಕುಮಾರ್ರವರಿಗೆ ಬಿ.ಫಾರಂ ನೀಡಿ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಸೋತಿದ್ದಲ್ಲದೇ ಹೊಳಲ್ಕೆರೆ ಮತ್ತು ಹೊಸದುರ್ಗ ಕಾರ್ಯಕರ್ತರ ನಡುವೆ ಗೊಂದಲಕ್ಕೆ ಸಿಲುಕುವಂತೆ ಮಾಡಿದ್ದಾರೆ ತಾವು ಈ ಸಮಸ್ಯೆಯನ್ನು ಸರಿಪಡಿಸುವಂತೆ ತಿಳಿಸಿದರು
ಶಿರಾ, ಪಾವಗಡ, ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು ತಾಲ್ಲೂಕುಗಳ ಕ್ಷೇತ್ರಗಳಲ್ಲಿ ಎರಡನೇ ಸ್ಥಾನವಿದ್ದು ಮುಂಚೂಣಿಯಲ್ಲಿ ಕೆಲಸ ಮಾಡಿರುತ್ತಾರೆ ಆದರೆ ಇಲ್ಲಿ ವೀರಶೈವ ಮತಗಳು ಜೆಡಿಎಸ್ ಕಡೆ ಒಲವು ಹೆಚ್ಚು ಇದೆ ಆದುದರಿಂದ ಜೆಡಿಎಸ್ ಪಕ್ಷದಿಂದ ನನಗೇನಾದರೂ ಟಿಕೆಟ್ ನೀಡಿದಿದ್ದರೆ ಪ್ರಬಲ ಪೈಪೋಟಿ ಮಾಡಿ ನನ್ನ ಪಕ್ಷವನ್ನು ಗೆಲ್ಲಿಸಲು ಪ್ರಯತ್ನ ಮಾಡುತ್ತಿದ್ದೆ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ವಿಶ್ವನಾಥ್ ಮಾತನಾಡಿ ತಾಲ್ಲೂಕು ಜೆಡಿಎಸ್ ಪಕ್ಷದ ಹಾಗೂ ಹೋಗುಗಳ ಬಗ್ಗೆ ಚರ್ಚೆ ಮಾಡಿದರು. ಲೊಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಚಟುವಟಿಕೆಗಳು ಚುರುಕುಗೊಳಿಸಬೇಕೆಂದು ತಿಳಿಸಿದರು.ಇದೇ ವೇಳೆ ಜೆಡಿಎಸ್ ಯುವ ಮುಖಂಡ ಅರ್ಫತ್ ಖಾನ್ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ