ಬೆಂಗಳೂರು 
ಬಿಜೆಪಿ ದೇಶಪ್ರೇಮದ ಬಗ್ಗೆ ಮಾತನಾಡುವವರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಬಿಜೆಪಿಯ ಕೆಲ ಸಂಘಟನೆಗಳು ದೇಶಪ್ರೇಮವನ್ನೇ ಗುತ್ತಿಗೆಗೆ ತೆಗೆದುಕೊಂಡವರಂತೆ ವರ್ತಿಸುವ ಮೂಲಕ ದೇಶದಲ್ಲಿ ದ್ವೇಷದ ವಾತಾವರಣ ಉಂಟುಮಾಡುವ ಕೆಲಸ ಮಾಡುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಲೋಕಸಭಾ ಚುನಾವಣೆ ಮೇಲಿದೆ.
ಉಗ್ರರ ದಾಳಿಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಹೊರಟಿದ್ದಾರೆ. ದಾಳಿ ಪ್ರಕರಣದಲ್ಲಿ ಮತಗಳನ್ನು ಹೇಗೆ ರಾಜಕೀಯವಾಗಿ ರೂಪಾಂತರ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಮೋದಿ ತೊಡಗಿದಗದಾರೆ ಎಂದರು.
ಅದಕ್ಕಾಗಿಯೇ ಸಿಆರ್ಪಿಎಫ್ ಯೋಧರ ಮೇಲಿನ ಉಗ್ರರ ದಾಳಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಅವರು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಗ್ರರ ದಾಳಿಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಸರ್ಜಿಕಲ್ ಸ್ಟ್ರೈಕ್ ಅನ್ನು ಸಹ ಪ್ರಚಾರಕ್ಕಾಗಿ ಬಳಸಿಕೊಂಡರು. ಆದರೆ ಪಾಕಿಸ್ತಾನವನ್ನು ಮಟ್ಟ ಹಾಕಲಲ್ಲ. ಪ್ರಧಾನಿ ಮೋದಿ ಅವರ ಅವಧಿಯಲ್ಲೇ ದೇಶದಲ್ಲಿ ಆತಂಕವಾದಿಗಳ ಆತಂಕ ಹೆಚ್ಚಾಗಿದೆ ಎಂದು ದಿನೇಶ್ ಗುಂಡೂರಾವ್ ದೂರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








