ಮೈಸೂರು :

ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುಣಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟು ಕೋಡ್ತಾರೋ ಗೊತ್ತಿಲ್ಲ. ಆದರೆ, ‘we are not beggers’ (ನಾವು ಬೆಗರ್ಸ್ ಅಲ್ಲ) ಬಹಳ ಸ್ಪಷ್ಟವಾಗಿ ಹೇಳ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಮೈತ್ರಿ ಸರ್ಕಾರ ರಚನೆಯಿಂದ ರಾಷ್ಟ್ರಕ್ಕೆ ಒಂದು ಸಂದೇಶ ರವಾನೆಯಾಗಬೇಕಾದರೆ ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ನಾನುಲೋಕಸಭಾ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ಆಡಳಿತ ಕಡೆಗೆ ನಾನು ಗಮನ ಹರಿಸಿದ್ದೇನೆ. ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಕಾಂಗ್ರೆಸ್ ಜೊತೆ ಮಾತುಕತೆ ಮೂಲಕ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








