ಬೆಂಗಳೂರು
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಸ್ಥಾನಗಳ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ನಾಯಕ, ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ರಾಜ್ಯದ ಮೈತ್ರಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸಿದ್ದು, ಐದು ವರ್ಷಗಳ ಅವಧಿ ಪೂರ್ಣ ಮಾಡಲಿದೆ. ಲೋಕಸಭಾ ಚುನಾವಣಾ ಸ್ಥಾನ ಹೊಂದಾಣಿಕೆಗೂ, ಸರ್ಕಾರದ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
