ಬೆಂಗಳೂರು :
ಮುಂದಿನ 6 ತಿಂಗಳಲ್ಲಿ ಇಡೀ ಕರ್ನಾಟಕ ವೈಫೈ ಸಂಪರ್ಕ ವ್ಯವಸ್ಥೆ ಮಾಡಲಾಗುವುದು. ಎಲ್ಲ ಸಬ್ ಅರ್ಬನ್ ರೈಲ್ವೆ ನಿಲ್ದಾಣಗಳಿಗೂ ವೈಫೈ ಸೌಲಭ್ಯ ನೀಡ್ತಿವಿ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಕಲ್ಲಿದ್ದಲು ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿಯಾಗಿ ರಾಜ್ಯದ ಕಲ್ಲಿದ್ದಲು ಪೂರೈಕೆ ಹಾಗೂ ಉಪನಗರ ರೈಲು ಯೋಜನೆ ಕುರಿತು ಚರ್ಚಿಸಿದರು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಮುಂದಿನ 6 ತಿಂಗಳಲ್ಲಿ ಇಡೀ ಕರ್ನಾಟಕ ವೈಫೈ ಸಂಪರ್ಕ ವ್ಯವಸ್ಥೆ ಮಾಡಲಾಗುವುದು. ಎಲ್ಲ ಸಬ್ಅರ್ಬನ್ ರೈಲ್ವೇ ನಿಲ್ದಾಣಗಳಿಗೂ ವೈಫೈ ಸೌಲಭ್ಯ ನೀಡ್ತೀವಿ ಎಂದು ಗೋಯೆಲ್ ಭರವಸೆ ನೀಡಿದರು.
ಉಪನಗರ ರೈಲ್ವೆ ಯೋಜನೆಯ ಬಗ್ಗೆ ರಾಜ್ಯ ಸರ್ಕಾರ ಭೂಮಿ ತೆರವು ಬಗ್ಗೆ ಚಿಂತಿಸಿ, ಕೆಲಸ ಮಾಡುತ್ತೆ. ರೈಲ್ವೆ ಇತಿಹಾಸದಲ್ಲೇ ಇಷ್ಟು ವೇಗವಾಗಿ ಯಾವುದೂ ಈ ರೀತಿ ಕೆಲಸ ಆಗಿಲ್ಲ. 23 ಸಾವಿರ ಕೋಟಿ ರೂ. ಯೋಜನೆಯಲ್ಲಿ 160 ಕಿ.ಮೀ. ದೂರ ಈ ಕೆಲಸ ನಡೆಯಲಿದೆ. ಮೆಟ್ರೋ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಿಗೆ ಇದರಿಂದ ಸಂಪರ್ಕ ಸಿಗಲಿದೆ. 80 ನಿಲ್ದಾಣಗಳಿಗೆ ಸಬ್ ಅರ್ಬನ್ ಯೋಜನೆಯಿಂದ ಸಂಪರ್ಕ ಸಿಗಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಸಬ್ಅರ್ಬನ್ ರೈಲ್ವೆ ಯೋಜನೆ ಜಾರಿಗೆ ರಾಜ್ಯ ಸರ್ಕಾರ 19 ಷರತ್ತುಗಳನ್ನು ವಿಧಿಸಿತ್ತು. ಈ ಸಂಬಂಧ ನಾನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದೆ. ಇಂದು ಒಂದೇ ಸಭೆಯಲ್ಲಿ ಆ ಎಲ್ಲ ಷರತ್ತುಗಳನ್ನು ರದ್ದು ಮಾಡಲು ಸಿಎಂ ಒಪ್ಪಿಗೆ ನೀಡಿದ್ದಾರೆ. ಸುಮಾರು 6000 ಕೋಟಿ ರೂ.ಮೌಲ್ಯದ ಭೂಮಿಯನ್ನು ಕೇವಲ ಒಂದು ರೂ. ಗುತ್ತಿಗೆಗೆ ನೀಡಲಾಗುತ್ತಿದೆ. 70ಕಿ.ಮೀ ಮಾರ್ಗ ಎತ್ತರಿಸಿದ ಮಾರ್ಗ ಹಾಗೂ 90 ಕೀಮಿ ಉದ್ದ ಸಾಧಾರಣ ಮಾರ್ಗವಾಗಿ ರೈಲ್ವೆ ಮಾರ್ಗ ರೂಪಿಸಲು ರೈಲ್ವೆ ಇಲಾಖೆ ಉದ್ದೇಶಿಸಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ