ಬೆಂಗಳೂರು :

ಸ್ವಾತಂತ್ರ ಹೋರಾಟಗಾರ ಹಾಗೂ ಹಿರಿಯ ಸಾಹಿತಿಯಾಗಿದ್ದ ನಾಡೋಜ ಕೊ. ಚನ್ನಬಸಪ್ಪ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಬಸಪ್ಪ ಅವರಿಗೆ 90 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟಿಪ್ಪು ಜಯಂತಿ ಆಚರಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡಗು ಸಮೀಪದ ಆಲೂರಿನಲ್ಲಿ ಜನಿಸಿದ ಚೆನ್ನಬಸಪ್ಪ ವಿದ್ಯಾರ್ಥಿಯಾಗಿದ್ದಾಗಲೇ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದ್ದರು.
ಕರ್ನಾಟಕ ಏಕೀಕರಣದ ಹೋರಾಟಗಾರ,ನ್ಯಾಯನಿಷ್ಠುರವಾದಿ ಪ್ರಕರ ವೈಜ್ಞಾನಿಕ ಲೇಖಕರಾಗಿದ್ದರು. ವಿಜಯಪುರದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ನಾಡೋಜದಂತಹ ಅನೇಕ ಪ್ರಶಸ್ತಿಗಳು ಲಭಿಸಿವೆ.
ಖಜಾನೆ, ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ರಕ್ತತರ್ಪಣ, ಹಿಂದಿರುಗಿ ಬರಲಿಲ್ಲ, ನ್ಯಾಯಾಲಯದ ಸತ್ಯಕಥೆಗಳು, ಪ್ರಾಣಪಕ್ಷಿ, ಹೃದಯ ನೈವೇದ್ಯ ಮುಂತಾದ ಹಲವು ಕೃತಿಗಳನ್ನು ಅವರು ರಚಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








