ನಾಳೆ ಯುದ್ಧ ಸ್ಮಾರಕ ಲೋಕಾರ್ಪಣೆ..!!!

ನವದೆಹಲಿ:
 
         ದೆಹಲಿಯ ಅಮರ್ ಜವಾನ್ ಜ್ಯೋತಿ ಸಮೀಪದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣವಾಗಿದ್ದು ನಾಳೆ ದೇಶಕ್ಕೆ ಸಮರ್ಪಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.ಮೋದಿ ತಮ್ಮ 53ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದಾಗ ೀ ವಿಷಯ ಪ್ರಸ್ತಾಪಿಸಿದ್ದಾರೆ .
        ಇದು ಈ ವರ್ಷ ಪ್ರಧಾನಿ ಮೋದಿಯವರ ಎರಡನೇ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ. ಅಲ್ಲದೆ ದೇಶವನ್ನು ಬೆಚ್ಚಿ ಬೀಳಿಸಿದ್ದ ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ಇದು ಮೋದಿಯವರ ಮೊದಲ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ.
       “ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸರಿಸಾಟಿಯಿಲ್ಲದ ಧೈರ್ಯ ಮತ್ತು ಸ್ಥೈರ್ಯವನ್ನು ಪ್ರದರ್ಶಿಸಿದೆ.ಒಂದೆಡೆ ಅವರು ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಸತತ ಪ್ರಯತ್ನದಲ್ಲಿದ್ದಾರೆ. ಆದರೆ ಇದೇ ವೇಳೆ ಭಯೋತ್ಪಾದಕರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದ್ದಾರೆ.” ಪ್ರಧಾನಿ ಹೇಳಿದ್ದಾರೆ. 
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link