ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಿದ್ದು

ಹುಬ್ಬಳ್ಳಿ :

      ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

      ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸೀಟು ಹಂಚಿಕೆ ವಿಚಾರವಾಗಿ ಇಂದು ಕಾಂಗ್ರೆಸ್​ -ಜೆಡಿಎಸ್ ನಾಯಕರು​ ಬೆಂಗಳೂರಿನಲ್ಲಿ  ಸಭೆ ನಡೆಸಲಿದ್ದಾರೆ. ಈ ಸಭೆ ಎರಡು ನಾಯಕರಿಗೆ ತೃಪ್ತಿ ನೀಡಲಿದೆ ಎಂಬ ಭರವಸೆ ಇದೆ. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್​ ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಇದೊಂದೇ ಮಾನದಂಡವಾಗಲಿದೆ. ಸೀಟು ಹಂಚಿಕೆ ಕುರಿತು ಎರಡು ನಾಯಕರ ನಡುವೆ ಒಪ್ಪಂದವಾಗಲಿದೆ ಎಂಬ ಆಶಾಭಾವನೆ ಇದೆ ಎಂದಿದ್ದಾರೆ.

      ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್​ಗಾಗಿ ಅಭ್ಯರ್ಥಿಗಳ ಪೈಪೋಟಿ ಶುರುವಾಗಿದ್ದು, ಇದರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್​-ಜೆಡಿಎಸ್​ ಮಧ್ಯೆ ಹಗ್ಗ ಜಗ್ಗಾಟ ನಡೆದಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link