ಲಕ್ನೋ:
ತಾನೊಬ್ಬ ಪ್ರಧಾನಿ ಎನ್ನುವ ಅಹಂ ಭಾವನೆ ಇಲ್ಲದೇ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‍ನ ತ್ರಿವೇಣಿ ಸಂಗಮದಲ್ಲಿ ಪೌರಕಾರ್ಮಿಕರ ಪಾದ ಪೂಜೆ ಮಾಡಿದ ವೀಡಿಯೋ ಈಗ ವೈರಲ್ ಆಗಿದೆ.
ಇತಿಹಾಸದಲ್ಲೇ ಮೊದಲ ಬಾರಿ ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರಧಾನಿ ಎಂಬ ಖ್ಯಾತಿಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.ಹಣೆಗೆ ವಿಭೂತಿ ಹಚ್ಚಿಕೊಂಡಿದ್ದ ಪ್ರಧಾನಿ ಮೋದಿ ಅವರು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಜನ ಪೌರಕಾರ್ಮಿಕರ ಪಾದಕ್ಕೆ ನೀರು ಹಾಕಿ ತೊಳೆದು, ಕರವಸ್ತ್ರದಿಂದ ಸ್ವಚ್ಛಗೊಳಿಸಿದರು. ಪಾದಪೂಜೆಯ ಬಳಿಕ ಅವರಿಗೆ ಶಾಲು ಹೊದಿಸಿ ಕೈಮುಗಿದು ಧನ್ಯವಾದ ತಿಳಿಸಿದರು.
#WATCH: Prime Minister Narendra Modi washes feet of sanitation workers in Prayagraj pic.twitter.com/otTUJpqynU
— ANI UP (@ANINewsUP) February 24, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
