ಬೆಂಗಳೂರು
ವೇಗವಾಗಿ ಬಂದ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಪೊಲೀಸ್ ಇನ್ಸ್‍ಪೆಕ್ಟರ್ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಾಯಗೊಂಡಿರುವ ಇನ್ಸ್‍ಪೆಕ್ಟರ್ ಟಿ ಡಿ ರಾಜು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ರಸ್ತೆಯಲ್ಲಿ ರಾಜು ಅವರು ಇಂದು ಬೆಳಗ್ಗೆ ಸ್ವಿಮ್ಮಿಂಗ್ ಮಾಡಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ವ್ಯಾನ್ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡ ಇನ್ಸ್‍ಪೆಕ್ಟರ್ ಟಿ ಡಿ ರಾಜು ಅವರನ್ನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜು ಅವರು ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








