ವಾಷಿಂಗ್ಟನ್:

ಪಾಕಿಸ್ತಾನದ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದೆ ಮತ್ತು ಇದ್ದು ಜಾಗತಿಕವಾಗಿ ಭಾರತದ ಭಯೋತ್ಪಾದನಾ ವಿರೋಧಿ ಹೋರಾಟಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇದಕ್ಕೆ ಪ್ರತಿಯಾಗಿ ನೀವೇನಾದರು ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ವಿಶ್ವದ ದೊಡ್ಡಣ್ಣ ಅಮೇರಿಕಾ ತಿಳಿಸಿದೆ .
ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿದ್ದ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡಿ ಸರಿ ಸುಮಾರು 350 ಉಗ್ರರನ್ನು ಹೊಡೆದುರುಳಿಸಲಾಗಿದೆ.ಮತ್ತು ಈ ದಾಳಿಯಲ್ಲಿ ಪಾಕ್ ಸೇನೆ ಅಥವಾ ಸಾರ್ವಜನಿಕರ ಮೇಲೆ ಯಾವುದೇ ದಾಳಿಗಳಾಗಿಲ್ಲ. ಹೀಗಾಗಿ ನೀವೆನಾದರೂ ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ನಿಮ್ಮ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಅಮೆರಿಕಾದ ಕಾರ್ಯದರ್ಶಿ ಮೈಕ್ ಪೊಂಪೆಯೊ ಪಾಕ್ ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಇದೇ ವೇಳೆ, ಭಯೋತ್ಪಾದನೆ ವಿರುದ್ಧ ಈಗಲಾದರೂ ಪರಿಣಾಮಕಾರಿ ಕ್ರಮ ಕೈಗೊಳ್ಳಿ ಅದು ನಿಮಗೆ ಒಳ್ಳೆಯದ್ದು. ಇಲ್ಲದಿದ್ದರೆ ಭವಿಷ್ಯದಲ್ಲಿ ಹೆಚ್ಚಿನ ಪರಿಣಾಮ ಹೆದರಿಸಬೇಕಾಗುತ್ತದೆ ಎಂದು ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
