ದಾವಣಗೆರೆ:
ನಗರದ ವಕೀಲರ ಸಾಂಸ್ಕೃತಿಕ ಭವನದಲ್ಲಿ ಫೆ.28ರಿಂದ ಮಾ.2ರ ವರೆಗೆ ಕಾನೂನು ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಹೆಚ್.ದಿವಾಕರ್ ತಿಳಿಸಿದರು.
ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬೆಳಗ್ಗೆ 10.30ಕ್ಕೆ ಕಾರ್ಯಾಗಾರವನ್ನು ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಕೆ.ಬಿ.ನಾಯಕ್ ಉದ್ಘಾಟಿಸುವರು. ವಕೀಲ ಸಂಘದ ಅಧ್ಯಕ್ಷ ಎನ್.ಟಿ.ಮಂಜುನಾಥ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್, ಪರಿಷತ್ ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ, ಸದಸ್ಯ ಎಸ್.ಬಸವರಾಜ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.
ಕಾರ್ಯಾಗಾರದಲ್ಲಿ ಹಿಂದೂ ವಿವಾಹ ಕಾಯ್ದೆ, ಎವಿಡೆನ್ಸ್ ಆಕ್ಟ್, ಪೋಕ್ಸೋ ಸೇರಿದಂತೆ ವಿವಿಧ ವಿಷಯವಾಗಿ ಒಟ್ಟು 7 ಗೋಷ್ಠಿಗಳು ಜರುಗಲಿವೆ. ಮಾ.2ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ, ಜಿ.ನರೇಂದ್ರರ್ ಪಾಲ್ಗೊಳ್ಳಲಿದ್ದಾರೆ ಎಂದರು.
ಕಿರಿಯ ಕಾನೂನು ಪದವೀಧರರಿಗೆ ಮಾತ್ರವಲ್ಲದೆ, ಕಾನೂನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘದ ಎನ್.ಟಿ.ಮಂಜುನಾಥ, ಬಿ.ಎಸ್.ಲಿಂಗರಾಜ, ಎಸ್.ಬಸವರಾಜ, ಅನ್ನಪೂರ್ಣಮ್ಮ, ಹನೀಫ್ ಸಾಬ್, ಗಣೇಶ ಕುಮಾರ, ವಿಜಯ ಕುಮಾರ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
