ಚಾಮರಾಜನಗರ :
ಸರ್ಜಿಕಲ್ ಸ್ಟ್ರೈಕ್ ಹಿಂದೆ ಷಡ್ಯಂತ್ರ ಇದ್ದು, ಬಿಜೆಪಿಯ ಈ ಷಡ್ಯಂತ್ರ ಒಂದೆರಡು ದಿನಗಳಲ್ಲಿ ಬಹಿರಂಗವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ವೋಟಿಗೋಸ್ಕರ ಅವರು ಯಾವ ಹಂತಕ್ಕಾದರೂ ಹೋಗುತ್ತಾರೆ ಎಂಬುದು ಇದರಿಂದ ಸಾಬೀತಾಗಿದೆ. ಯಡಿಯೂರಪ್ಪ ಅವರ ಮನಸ್ಸಿನಲ್ಲಿರುವುದು ಬಹಿರಂಗವಾಗಿದೆ. 44 ಯೋಧರನ್ನು ಬಲಿ ನೀಡುವ ಮೂಲಕ 22 ಸೀಟುಗಳನ್ನು ಗೆಲ್ಲಲು ಬಿಜೆಪಿ ಮುಂದಾಗಿದೆ. ಯಡಿಯೂರಪ್ಪ ಅವರೇ ಈ ಕುರಿತು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ಅರ್ಥವಾಗುತ್ತದೆ ಎಂದರು.
ಇನ್ನು ಭಾರತ ಹಾಗೂ ಪಾಕಿಸ್ತಾನ ಈ ಎರಡೂ ದೇಶಗಳಲ್ಲಿ ಯುದ್ಧೋನ್ಮಾದ ಸ್ಥಿತಿ ನಿರ್ಮಾಣವಾಗಿದ್ದರೂ ರಕ್ಷಣಾ ಮಂತ್ರಿ ಹೊರಗೆ ಬಂದಿಲ್ಲ. ಅವರು ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ