ಬೆಂಗಳೂರು
ದಕ್ಷಿಣ ಭಾರತೀಯ ರಾಜ್ಯಗಳ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಚುನಾವಣಾ ಪ್ರಣಾಳಿಕೆ ಸಭೆ ನಡೆಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಹೇಗಿರಬೇಕು ಎಂಬ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ನಗರದ ಕೇಂದ್ರ ಬಿಜೆಪಿ ಕಛೇರಿಯಲ್ಲಿ ನಡೆದ ಚುನಾವಣಾ ಪ್ರಣಾಳಿಕೆ ಸಭೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಗೋವಾ, ತಮಿಳುನಾಡು, ಕೇರಳ, ಮತ್ತಿತರ ರಾಜ್ಯಗಳ ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಚುನಾವಣಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಕಿರಣ್ ಮಹೇಶ್ವರಿ ಅವರು ಶಿಕ್ಷಣ, ಆರೋಗ್ಯ, ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜನರ ಅಭಿವೃದ್ಧಿಗೆ ಅನುಕೂಲಕರವಾದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ, ಜನಧನ್ ಯೋಜನೆ, ರೈತರಿಗೆ ನೆರವಾಗುವಂತಹ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದು ಅವರು ತಿಳಿಸಿದರು.ಬಾಲಾಕೋಟ್ ಸೇರಿದಂತೆ ಮೂರು ಉಗ್ರರ ಶಿಬಿರಗಳ ಮೇಲೆ ವಾಯುಸೇನೆ ದಾಳಿ ಬಳಿಕ ದೇಶ ಯಾರ ಕೈಯಲ್ಲಿ ಸುರಕ್ಷಿತವಾಗಿರುತ್ತದೆ ಎಂಬುದು ಜನತೆಗೆ ಗೊತ್ತಾಗಿದೆ ಎಂದು ತಿಳಿಸಿದರು.
ಇಂದು ಸಭೆಯಲ್ಲಿ ಚುನಾವಣಾ ಪ್ರಣಾಳಿಕೆ ಬಗ್ಗೆ ನಡೆಯುವ ಚರ್ಚೆಯೂ ರಾಜಕೀಯ ಅಜಾಂಡ ಅಲ್ಲ. ದೇಶದ ಅಭಿವೃದ್ಧಿಗಾಗಿ ಅಗತ್ಯವಾದ ಅಂಶಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಅವರು ಹೇಳಿದರು.ಪ್ರಾಸ್ತಾವಿಕ ಭಾಷಣ ಮಾಡಿದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತೀ ಶೆಟ್ಟಿಯವರು ಬಿಜೆಪಿ ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಸಮಾಜಕ್ಕೆ ತಮ್ಮ ಕೊಡುಗೆಯನ್ನು ನೀಡುತ್ತಲೇ ಬಂದಿದೆ. ಜನರ ಸಮಸ್ಯೆಗಳ ನಡುವೆ ನಡೆದುಕೊಂಡು ಬಂದಿದೆ ಎಂದು ಹೇಳಿದರು.
ಚುನಾವಣಾ ಪ್ರಣಾಳಿಕೆ ಸಭೆಯಲ್ಲಿ ಚರ್ಚಿಸಲಾಗುವ ಅಂಶಗಳನ್ನು ಕೇಂದ್ರ ಬಿಜೆಪಿ ವರಿಷ್ಠರಿಗೆ ವರದಿ ಸಲ್ಲಿಸಬೇಕಾಗಿದೆ.ಹಾಗಾಗಿ ಇಂದಿನ ಸಭೆಯಲ್ಲಿ ದೇಶದ ಜನತೆಯ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಕಿರಣ್ ಮಹೇಶ್ವರಿ ಅವರು ಚುನಾವಣಾ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ, ಆರೋಗ್ಯ, ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜನರ ಅಭಿವೃದ್ಧಿಗೆ ಅನುಕೂಲಕರವಾದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ, ಜನಧನ್ ಯೋಜನೆ, ರೈತರಿಗೆ ನೆರವಾಗುವಂತಹ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದು ಅವರು ತಿಳಿಸಿದರು.ಬಾಲಾಕೋಟ್ ಸೇರಿದಂತೆ ಮೂರು ಉಗ್ರರ ಶಿಬಿರಗಳ ಮೇಲೆ ವಾಯುಸೇನೆ ದಾಳಿ ಬಳಿಕ ದೇಶ ಯಾರ ಕೈಯಲ್ಲಿ ಸುರಕ್ಷಿತವಾಗಿರುತ್ತದೆ ಎಂಬುದು ಜನತೆಗೆ ಗೊತ್ತಾಗಿದೆ ಎಂದು ತಿಳಿಸಿದರು.
ಇಂದು ಸಭೆಯಲ್ಲಿ ಚುನಾವಣಾ ಪ್ರಣಾಳಿಕೆ ಬಗ್ಗೆ ನಡೆಯುವ ಚರ್ಚೆಯೂ ರಾಜಕೀಯ ಅಜಾಂಡ ಅಲ್ಲ. ದೇಶದ ಅಭಿವೃದ್ಧಿಗಾಗಿ ಅಗತ್ಯವಾದ ಅಂಶಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಅವರು ಹೇಳಿದರು.ಬಿಜೆಪಿ ಸಭೆಯಲ್ಲಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಾ ರಹಾಟ್ಕರ್, ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಅನಿತಾ ಗುಜರಾಲ್, ಅಜ್ಮಿರ್ ವಿಧಾನಸಭಾ ಕ್ಷೇತ್ರ ಅನಿತಾ ಬಾಂದಲ್,ಪಕ್ಷದ ಮುಖಂಡರಾಧ ನಟಿ ಶೃತಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
