ಇಸ್ಲಾಮಾಬಾದ್:
ಸ್ವತಃ ಮಸೂದ್ ಅಝರ್ ಮಾತನಾಡಿರುವ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ತಾನಿನ್ನೂ ಬದುಕಿದ್ದೀನಿ ಎಂದು ಹೇಳಿಕೊಂಡಿದ್ದಾನೆ.
ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಅಝರ್ನ 11.41 ನಿಮಿಷದ ಆಡಿಯೋ ಬಿಡುಗಡೆಗೊಂಡಿದ್ದು, ನಾನು ಮೃತಪಟ್ಟಿದ್ದೇನೆಂದು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ವರದಿ ಮಾಡಲಾಗುತ್ತಿದೆ. ನಾನು ಚೆನ್ನಾಗಿಯೇ ಇದ್ದೇನೆ. ಕಾಶ್ಮೀರಿಗಳನ್ನು ಭಾರತದವರು ದಮನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅಜರ್, ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಬೇಕೆಂದು ತನ್ನ ಹಿಂಬಾಲಕರಿಗೆ ಕರೆ ನೀಡಿದ್ದಾನೆ.
ಮಸೂದ್ ಅಝರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆತ ಮನೆಯಿಂದ ಹೊರಬರಲೂ ಸಾಧ್ಯವಿಲ್ಲದಂಥ ಸ್ಥಿತಿಯಲ್ಲಿದ್ದಾನೆ ಎಂದಿದ್ದ ಪಾಕ್ ವಿದೇಶಾಂಗ ಸಚಿವ ಖುರೇಶಿ ಪರ ಮಾತನಾಡಿದ ಅಝರ್, ವಿದೇಶಾಂಗ ಸಚಿವರು ಯಾವುದೋ ಒತ್ತಡಕ್ಕೆ ಮಣಿದು ಹೀಗೆ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಭಾರತದ ಆಡಳಿತ ತಂತ್ರವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾನೆ.
ರಾಷ್ಟ್ರೀಯ ಕ್ರಿಯಾ ಯೋಜನೆಯಡಿ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾಗಿರುವ ಪಾಕಿಸ್ತಾನ ಸರಕಾರದ ವಿರುದ್ದ ಮಸೂದ್ ಅಜರ್ ಕಿಡಿಕಾರಿದ್ದಾನೆ. ಭಾರತದ ಒತ್ತಾಯದ ಮೇರೆಗೆ ಕ್ರಮ ಕೈಗೊಳ್ಳುತ್ತಿರುವುದನ್ನು ವಿರೋಧಿಸಿದ ಜೈಷ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಮಸೀದಿಗಳು ಹಾಗೂ ನಿಜವಾದ ಮುಸ್ಲಿಮರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕೆಂದು ಎಚ್ಚರಿಕೆ ನೀಡಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
