ಬೆಂಗಳೂರು:
ಅಂಬರೀಶ್ ಸತ್ತು ಇನ್ನೂ ಇನ್ನೂ ಆರು ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಲೋಕಸಭೆ ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯ ಜಿಲ್ಲೆಯ ಪ್ರಚಾರದ ಕಣ ರಂಗೇರಿದೆ. ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿರುವ ಸುಮಲತಾ ಅಂಬರೀಶ್ ಪ್ರಚಾರ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಹೆಚ್.ಡಿ.ರೇವಣ್ಣ ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಆದರೆ ಸುಮಲತಾ ಅವರಿಗೆ ಯಾವುದೇ ಕೃತಜ್ಞತೆಯೂ ಇಲ್ಲ. ಸುಮಲತಾ ಅವರು ಚಾಲೆಂಜ್ ಮಾಡುತ್ತಿದ್ದಾರೆ. ಇದನ್ನ ನಾವು ಎದುರಿಸಲು ಸಿದ್ಧರಾಗಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
