ವಿಕಲಚೇತನರ ಮತದಾನಕ್ಕಾಗಿ ವೀಲ್‍ಚೇರ್

ದಾವಣಗೆರೆ :

         ಮತಗಟ್ಟೆವಾರು ವಿಕಲಚೇತನ ಮತದಾರರ ಮಾಹಿತಿ ಪಡೆದು, ಅಗತ್ಯ ಪ್ರಮಾಣದಲ್ಲಿ ವೀಲ್‍ಚೇರ್ ವ್ಯವಸ್ಥೆ ಮಾಡಲಾಗುವುದು ಎಂದು ಜಿ.ಪಂ. ಉಪ ಕಾರ್ಯದರ್ಶಿ ಭೀಮಾನಾಯ್ಕ ತಿಳಿಸಿದರು.

         ಇಲ್ಲಿನ ಎಂಸಿಸಿ ಬಿ ಬ್ಲಾಕ್‍ನ ಸ್ತ್ರೀಶಕ್ತಿ ಭವನದಲ್ಲಿ ಶುಕ್ರವಾರ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ವಿಕಲಚೇತನರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ವಿಕಲಚೇತನರು, ಎಂ.ಆರ್.ಡಬ್ಲ್ಯು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

          ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯೊಳಗೆ ಬರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರ ಮಾಹಿತಿಯನ್ನು ಇ.ಆರ್.ಎಂ.ಎಸ್‍ನಲ್ಲಿ ಮ್ಯಾಪಿಂಗ್ ಮಾಡಿಸುವುದು ಮತ್ತು ಮತಗಟ್ಟೆವಾರು ವೀಲ್‍ಚೇರ್ ಅವಶ್ಯಕವಾಗಿರುವ ವಿಕಲಚೇತನರ ಮಾಹಿತಿ ನೀಡಿದರೆ, ಅಗತ್ಯ ವೀಲ್‍ಚೇರ್ ವ್ಯವಸ್ಥೆ ಮಾಡಲಾಗುವುದು ಎಂದರು.

            ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರ್ಯಾಂಪ್ ಮತ್ತು ರೇಲಿಂಗ್ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯವಾಗಿರುತ್ತದೆ. ಮತದಾನ ದಿನದಂದು ಬೆಳಿಗ್ಗೆ 11 ಗಂಟೆವರೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು, ಗರ್ಭಿಣಿ ಮಹಿಳೆಯರು, ಬಾಣಂತಿಯರು ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ಸಲಹೆ ನೀಡಿದರು.

            ತರಬೇತಿಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರ ಪುನರ್ವಸತಿಗಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂಗಳು ಮತ್ತು ಒಟ್ಟು 128 ವಿಕಲಚೇತನರು ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಮತದಾನದ ಪ್ರಾಮುಖ್ಯತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಶಶಿಧರ್, ಕಾಂಪೋಜಿಟ್ ರಿಹ್ಯಾಬಿಟೇಶನ್ ಸೆಂಟರ್ (ಸಿ.ಆರ್.ಸಿ) ದಾವಣಗೆರೆ ಮತ್ತು ವಿಕಲಚೇತನರ ಸಹಾಯವಾಣಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link