ಚಿತ್ರದುರ್ಗ;
ದೇಶದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ ಕರೆ ನೀಡಿದರು
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ನಗರದ ಸ್ಟೇಡಿಯಂ ರಸ್ತೆಯ ಬುದ್ದ ನಗರದ ನಗರ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಲಸಿಕೆಯನ್ನು ಹಾಕಿ ಮಾತನಾಡಿದರು.
ದೇಶಕ್ಕೆ ಉತ್ತಮವಾದ ಪ್ರಜೆಗಳನ್ನು ನೀಡುವುದರ ಎಲ್ಲರ ಜವಾಬ್ದಾರಿಯಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ.ಮಕ್ಕಳ ಆರೋಗ್ಯಕ್ಕಾಗಿ ಕಡ್ಡಾಯವಾಗಿ ಪೊಲಿಯೋ ಹನಿ ಹಾಕಿಸಲು ಪೋಷಕರು ಮುಂದಾಗಬೇಕು ಎಂದರು
ಮಕ್ಕಳು ಜನನವಾಗುವಾಗ ಯಾವುದೇ ನ್ಯೂನತೆ ಇಲ್ಲದೆ ಜನನವಾಗಬೇಕೆಂಬುದು ಎಲ್ಲರ ಆಶಯವಾಗಿದೆ ಆದರೆ ಕೆಲವೊಮ್ಮೆ ಬಾರಿ ಜನನವಾದ ಮೇಲೆ ಅನಾಹುತಗಳು ಆಗುತ್ತದೆ ಇದನ್ನು ತಪ್ಪಿಸಲು ಸರ್ಕಾರದವತಿಯಿಂದ ಈ ರೀತಿಯಾದ ಲಸಿಕೆ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ಹಾಕಿಸಿದರೆ ಪೋಲಿಯೂ ರೋಗವನ್ನು ನಿರ್ಮೂಲನೆ ಮಾಡಲು ಸಾಧ್ಯವಿದೆ ಇದರಿಂದ ಎಲ್ಲಾ ಪೋಷಕರು ಸಹಾ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸಿದರೆ ತಮ್ಮ ಮಕ್ಕಳು ಪೋಲಿಯೋ ರೋಗದಿಂದ ದೂರವಾಗಲು ಸಹಾಯವಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಸೌಭಾಗ್ಯ ಬಸವರಾಜನ್ ಮಾತನಾಡಿ, 5 ವರ್ಷದ ಮಕ್ಕಳಿಗೆ ಈಗಾಗಲೇ ಹಲವಾರು ಬಾರಿ ಪೋಲಿಯೋ ಹನಿಯನ್ನು ಹಾಕಿಸಿದ್ದರು ಸಹಾ ಇಂದು ಮತ್ತೇ ಪೋಲಿಯೋ ಹನಿಯನ್ನು ಹಾಕಿಸುವದನ್ನು ಮರೆಯಬೇಡಿ ಇದರಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ನಿರಜ್ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಇಂದಿನಿಂದ ಪ್ರಾರಂಭವಾಗಿ 13 ರವರೆಗೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1231 ತಂಡಗಳನ್ನು ರಚಿಸಿ, ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿ ಈ ಬಾರಿಯೂ ಸಹ ಎರಡು ಹನಿಗಳ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು.
ಕಾರ್ಯಕ್ರಮದ ಮೇಲ್ವಿಚಾರಣೆಗೆ 225 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಪುನ: ಮಾ.10 ರಿಂದ 13 ರವರೆಗೆ ಪೋಲಿಯೋ ಹಾಕಿಸಲು 151613 ಮಕ್ಕಳನ್ನು ಗುರುತಿಸಲಾಗಿದೆ ಎಂದರು. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಸರ್ಕಾರೇತರ ಸಂಘಸಂಸ್ಥೆಗಳು, ಧಾರ್ಮಿಕ ಮುಖಂಡರುಗಳು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯವರು ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಸಬೇಕೆಂದು ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








