ರಾಷ್ಟ್ರೀಯ ಲೋಕ ಅದಾಲತ್

ಹಾವೇರಿ

       ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯ 700 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ವೈ.ಎಲ್.ಲಾಡಖಾನ್ ಅವರು ತಿಳಿಸಿದ್ದಾರೆ.ಜಿಲ್ಲೆಯ ನ್ಯಾಯಾಲಯಗಳಲ್ಲಿ ಎರಡನೆಯ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಕಕ್ಷಿಗಾರರು ಭಾಗವಹಿಸಿದ್ದರು.

       ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವೇತನ, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರ ಸಿವಿಲ್ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ, ಕಾರ್ಮಿಕ ವಿವಾದ, ಭೂಸ್ವಾಧೀನ, ಕಂದಾಯ ಪ್ರಕರಣಗಳು, ಸಿವಿಲ್ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ ನಡೆಸಲಾಯಿತು.

        700 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಯಿತು ಮತ್ತು ರೂ.4,89,82,028-00 ಗಳ ಪರಿಹಾರಧನ ವಿತರಣೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link