ಬಿಹಾರ:
ಕೆಲ ವರ್ಷಗಳ ಹಿಂದೆ ಇಡೀ ದೇಶದ ಗಮನ ಸೆಳೆದಿದ್ದ ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರು ಜೈಲುವಾಸಿಯಾದರು ಸಾಮಾಜಿಕ ಮಾದ್ಯಮಗಳಲ್ಲಿ ಸಕ್ರಿಯರಾಗಿರುವ ಬಗ್ಗೆ ಚುನಾವಣಾ ಆಯೋಗ ತನಿಖೆಗೆ ಆದೇಶಿಸಿದೆ.
ರಾಂಚಿಯ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ವದಂತಿ ಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ತನಿಖೆಗೆ ಆದೇಶಿಸಿದೆ.
ಲಾಲು ಪ್ರಸಾದ್ ಅವರ ಟ್ವಿಟರ್ ಮತ್ತು ಫೇಸ್ ಬುಕ್ ಖಾತೆಯನ್ನು ಜೈಲಿನಲ್ಲಿರುವ ಅವರೇ ಸ್ವತಃ ನಿರ್ವಹಿಸುತ್ತಿದ್ದಾರೋ ಅಥವಾ ಹೊರಗಡೆಯಿಂದ ಯಾರಾದರು ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ತನಿಖೆಯಿಂದ ತಿಳಿದುಕೊಳ್ಳಬೇಕಾಗಿದೆ ಎಂದು ಬಿಹಾರದ ಮುಖ್ಯ ಚುನಾವಣಾಧಿಕಾರಿ ಎಚ್ ಆರ್ ಶ್ರೀನಿವಾಸ ಹೇಳಿದ್ದಾರೆ.
ಲಾಲು ಅವರ ಟ್ವಿಟರ್ ಖಾತೆಯ ಮೇಲೆ ಆಯೋಗವು ಕಣ್ಣಿಟ್ಟಿದೆ ಎಂದು ಪಟ್ನಾದ ನಿರ್ವಚನಾಧಿಕಾರಿ ಸಂಜಯ್ ಸಿಂಗ್ ಅವರೂ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








