ಸೈನಿಕರ ಶೌರ್ಯ ಪ್ರಚಾರದ ವಸ್ತುವಾಗಬಾರದು

ದಾವಣಗೆರೆ:

      ಬಿಜೆಪಿ ಸೈನಿಕರ ಸೌರ್ಯವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಬಾಯಿ ಮಾಲತೇಶ್ ಡಿ. ಜಾಧವ್ ಅಸಮಾಧಾನ ವ್ಯಕ್ತಪಡಿಸಿದರು.

       ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್‍ನ ಮಹಿಳಾ ಘಟಕದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಸುಳ್ಳು ಪ್ರಚಾರ ಮಾಡಿ ಜನರನ್ನು ಮೋಡಿ ಮಾಡುತ್ತಿದೆ. ವಾಯುದಾಳಿ ಮತ್ತು ಸೈನಿಕರ ಶೌರ್ಯವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

       ನಮ್ಮ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಮರೆತು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಎಂದ ಅವರು, ಹೀಗಾಗಿ ಪಕ್ಷದ ಕಾರ್ಯಕರ್ತರು ಬೂತ್, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಮಹಿಳಾ ಕಾರ್ಯಕರ್ತರು ಮನೆ, ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕೆಂದು ಕಿವಿಮಾತು ಹೇಳಿದರು

       ಮೂರು ಬಾರಿ ಬಿಜೆಪಿ ಗೆದ್ದರೂ ಕ್ಷೇತ್ರದ ಅಭಿವೃದ್ಧಿ ಮಾಡುವಲ್ಲಿ ವಿಫಲರಾಗಿದ್ದಾರೆ. ಸೋಲಿನ ಆತ್ಮಾವಲೋಕನ ಮಾಡಿಕೊಂಡು ಈ ಬಾರಿ ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ಕಾರ್ಯಕರ್ತರು ಶ್ರಮಪಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮೇಯರ್ ಶೋಭಾ ಪಲ್ಲಾಗಟ್ಟೆ, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಗಳಾದ ಶುಭಮಂಗಳ, ಗೀತಾ ಕದರಮಂಡಲಗಿ, ಜಿಲ್ಲಾ ಘಟಕದ ಉಪಾಧ್ಯಕ್ಷೆ ಮಂಜಮ್ಮ, ಚಂದ್ರಮ್ಮ, ವಿದ್ಯಾ, ಉಮಾ, ನಾಗರತ್ನಮ್ಮ ಮತ್ತಿತರರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link