ಹಾವೇರಿ :
ಮಾಜಿ ಕೇಂದ್ರ ರಕ್ಷಣಾ ಸಚಿವರು ಹಾಗೂ ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಮನೋಹರ್ ಪರಿಕರ್ ರವರು ನಿಧರಾಗಿದ್ದು ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮನೋಹರ್ ಪರಿಕರ್ ರವರು ಐಐಟಿ ಪದವೀಧರಾಗಿದ್ದು,ಚಿಕ್ಕವಯಸ್ಸಿನಲ್ಲಿಯೇ ಆರ್ ಎಸ್.ಎಸ್. ಕಾರ್ಯಕರ್ತರಾಗಿ, ಮುಖ್ಯ ಶಿಕ್ಷಕರಾಗಿ ಸೇವೆಸಲ್ಲಿಸುತ್ತಾ ಅಜಾತ ಶತೃವಾಗಿ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದರು. ಮನೋಹರ್ ಪರಿಕರ್ ರವರ ನಿಧನದಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ಆತ್ಮಕ್ಕೆ ಭಗವಂತನು ಶಾಂತಿ ನೀಡಲಿ ಮತ್ತು ಕುಟುಂಬದವರಿಗೆ ದು:ಖ ಭರಿಸುವ ಶಕ್ತಿ ನೀಡಲೆಂದು ಸಂಸದರಾದ ಶಿವಕುಮಾರ ಉದಾಸಿ ತಿಳಿಸಿದ್ದಾರೆ.