ಉಡುಪಿ:
ಗೌರವಾನ್ವಿತ ಹುದ್ದೆಯಲ್ಲಿದ್ದುಕೊಂಡು ಆ ಹುದ್ದೆಗೆ ಸರಿತೂಗುವ ಮಾತನಾಡಿ. ನೀವು ಕರಾವಳಿ ಪ್ರದೇಶವನ್ನೇನು ಉದ್ಧಾರ ಮಾಡಿಲ್ಲ. ನಿಮ್ಮ ಕುಟುಂಬ ರಾಜಕಾರಣಕ್ಕೆ ಕರಾವಳಿ ಜನ ಬೆಂಬಲ ನೀಡುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಕರಾವಳಿ ಜನರಿಗೆ ತಿಳುವಳಿಕೆ ಇಲ್ಲ. ಅವರು ಮೋದಿಗೆ ವೋಟ್ ಹಾಕ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕರಾವಳಿಗೆ ನಿಮ್ಮ ಕೊಡುಗೆ ಏನು ಎಂದು ಮೊದಲು ಹೇಳಿ. ಉಡುಪಿ ಜನ ನಿಮ್ಮ ಮುಂದೆ ತಿರುಗಿ ಬಿದ್ದಿದ್ದಾರೆ. ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರ ಅವಹೇಳನ ಮಾಡ್ತೀರಾ.ಮೊದಲು ಕ್ಷಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.