ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ: ಸಿ.ವಿ.ನಟರಾಜ್

ಹಿರಿಯೂರು :

        ಇದೇ ಮಾರ್ಚ್ 21ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಈ ಬಾರಿ ತಾಲ್ಲೂಕಿನಿಂದ 3,453 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಹಾಗೂ 260 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 43 ಖಾಸಗಿ ಹಾಗೂ 12 ಪುನಾರಾವರ್ತಿತರು ಇದ್ದಾರೆ ಎಂಬುದಾಗಿ ಕ್ಷೇತ್ರಶಿಕ್ಷಣಾಧಿಕಾರಿ ಸಿ.ವಿ.ನಟರಾಜ್ ತಿಳಿಸಿದರು.

      ಈ ಸಾಲಿನ ವಾರ್ಷಿಕ ಪರೀಕ್ಷೆಗೆ ಮಾಡಿಕೊಂಡಿರುವ ಸಿದ್ಧತೆ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು ಪರೀಕ್ಷಾ ನಕಲು ತಡೆಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು, ಸೂಕ್ತ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ಹೇಳಿದರು.

      ಪ್ರತಿಪರೀಕ್ಷಾ ಕೇಂದ್ರದಲ್ಲೂ ಮುಖ್ಯ ಅಧೀಕ್ಷಕರು, ಸಹ ಅಧೀಕ್ಷಕರು, ಸ್ಥಾನಿಕ ಜಾಗೃತದಳದವರು ಇರುತ್ತಾರೆ. ಇವರಲ್ಲದೆ ಸಂಚಾರಿ ಜಾಗೃತ ದಳದವರು ಎಲ್ಲ ಕಡೆ ಆಕಸ್ಮಿಕವಾಗಿ ಭೇಟಿ ನೀಡಿ ತಪಾಸಣೆ ನಡೆಸುತ್ತಾರೆ ಎಂದು ಅವರು ಹೇಳಿದರು. ಪ್ರಸಕ್ತ ಸಾಲಿನಲ್ಲಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಎಲ್ಲ ಪ್ರೌಢಶಾಲೆಗಳಲ್ಲಿ ಗುಂಪು ಅಧ್ಯಯನ ಸಂವಾದ, ರಸಪ್ರಶ್ನೆ ಕಾರ್ಯಕ್ರಮಗಳ ಜೊತೆಗೆ ಸರಣಿಪೂರ್ವ ಪರೀಕ್ಷೆಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap