ಇಟಾನಗರ:
ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿರುವಾಗ ಈಶಾನ್ಯದಲ್ಲಿ ಬಿಜೆಪಿಗೆ ದೊಡ್ಡ ಆಘಾತವಾಗಹಿದೆ ಅದೇನೆಂದರೆ ಬಿಜೆಪಿ ಸಾಮೂಹಿಕ ರಾಜೀನಾಮೆ ಈ ಶಾಕ್ ಕಾರಣ .
ಬಿಜೆಪಿಯ ಇಬ್ಬರು ಸಚಿವರು, ಆರು ಜನ ಶಾಸಕರು ಸೇರಿದಂತೆ ಒಟ್ಟು 25 ಮುಖಂಡರು ಪಕ್ಷಕ್ಕೆ ಗುಡ್ಬೈ ಹೇಳಿದ್ದಾರೆ. ಈ ಮೂಲಕ ಎಲ್ಲರೂ ನ್ಯಾಷನಲ್ ಪಿಪಲ್ಸ್ ಪಾರ್ಟಿ (ಎನ್ಪಿಪಿ) ಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.
ಲೋಕಸಭಾ ಚುನಾವಣೆ ಜೊತೆಗೆ ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ನಿನ್ನೆಯಷ್ಟೇ ವಿಧಾನಸಭೆಯ 60 ಕ್ಷೇತ್ರಗಳ ಪೈಕಿ 54 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕೆಲ ಪ್ರಮುಖ ಶಾಸಕರು, ಸಚಿವರನ್ನೇ ಪಟ್ಟಿಯಿಂದ ಕೈಬಿಡಲಾಗಿದೆ. ಇದರಿಂದಾಗಿ ಒಟ್ಟು 25 ಜನರು ಬಿಜೆಪಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಜರ್ಪಮ್ ಗಾಮ್ಲಿನ್, ರಾಜ್ಯ ಗೃಹಸಚಿವ ಕುಮಾರ್ ವೈಯ್ ಹಾಗೂ ಪ್ರವಾಸೋದ್ಯಮ ಸಚಿವ ಜಾರ್ಕರ್ ಗಾಮ್ಲಿನ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಎನ್ಪಿಪಿ ಸೇರ್ಪಡೆಯಾಗಿದ್ದಾರೆ.