ಲಂಡನ್:
ಸಾವಿರಾರು ಕೋಟಿ ರೂಪಾಯಿ ಪಾವತಿಸದೇ ದೇಶ ಬಿಟ್ಟು ಓಡಿಹೋಗಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಲಂಡನ್ನಲ್ಲಿ ಬಂಧಿಸಲಾಗಿದೆ.
ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 13 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೇ ತಲೆತಪ್ಪಿಸಿಕೊಂಡಿದ್ದರು. ಆದರೀಗ ಅವರನ್ನು ಲಂಡನ್ನಲ್ಲಿ ಬಂಧನ ಮಾಡಲಾಗಿದ್ದು ಭಾರತ ಹಸ್ತಾಂತರ ಪ್ರಕ್ರಿಯೆಗೆ ಮುಂದಾಗುವ ಸಾಧ್ಯತೆಯಿದೆ. ಎಲ್ಲವೂ ಲೆಕ್ಕಾಚಾರಗಳಂತೆ ನಡೆದರೆ ಮದ್ಯ ದೊರೆ ವಿಜಯ್ ಮಲ್ಯಾ ಸ್ಥಿತಿಯೇ ನೀರವ್ ಮೋದಿಗೂ ಬರಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ