ಮೈತ್ರಿ ಮುಖಂಡಕರು ಭ್ರಮೆಯಲ್ಲಿದ್ದಾರೆ : ವಿ ಸೋಮಣ್ಣ

ತುಮಕೂರು

   ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಬರಲಿದ್ದು, ನರೇಂದ್ರ ಮೋದಿಯವರೇ ಮತ್ತೆ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತ ಪಡಿಸಿದರು.

    ನಗರದಲ್ಲಿ ನೂತನವಾಗಿ ಚುನಾವಣಾ ಕಚೇರಿ ಉದ್ಘಾಟಿಸಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರೇ ಆಗಬೇಕು ಎಂಬುದು ಜನರ ಆಶಯವಾಗಿದೆ. ನರೇಂದ್ರ ಮೋದಿಯವರು ದೇಶಕ್ಕೆ ಉನ್ನತ ಕೊಡುಗೆ ನೀಡಿದ್ದಾರೆ.

     ಮೋದಿ ಆಡಳಿತದಿಂದ ಹಳ್ಳಿಗಳ ಬದಲಾವಣೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

   ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಅದೇ ರೀತಿ ಇದೀಗ ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಗಳಿಸಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದೇವೆ. ಬಿಜೆಪಿ ಕಾರ್ಯಕರ್ತರ ಉತ್ಸಾಹ, ಪಕ್ಷದ ನಿಷ್ಠೆ, ಬಿಜೆಪಿಯನ್ನು ಗೆಲ್ಲಿಸಬೇಕು ಎಂಬ ಮನೋಭಾವ ಹೆಚ್ಚಾಗಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಪಕ್ಷ ಸಂಘಟನೆಗೆ ಹೆಚ್ಚಿನ ಆಧ್ಯತೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಲಿದ್ದೇವೆ ಎಂದರು.

    ಚುನಾವಣೆ ನಿಮಿತ್ತ, ಯಾರು ಯಾವ ಕೆಲಸ ಮಾಡಬೇಕು ಎಂಬುದನ್ನು ನಿರಂತರವಾಗಿ ಚರ್ಚೆ ಮಾಡುವ ಉದ್ದೇಶಿದಿಂದ ಚುನಾವಣಾ ಕಚೇರಿಯನ್ನು ತೆರೆಯಲಾಗಿದೆ. ಇಲ್ಲಿಂದ ಪ್ರತಿನಿತ್ಯ ಒಂದಲ್ಲಾ ಒಂದು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರಲ್ಲದೆ, ಈ ಲೋಕಸಭಾ ಚುನಾವಣೆಯು ದೇಶದ ಸ್ಥಿತಿಗತಿಗಳನ್ನೇ ಬದಲಾಯಿಸುವ ಚುನಾವಣೆಯಾಗಿದೆ. ಈ ದೇಶವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಮೋದಿಯವರು ಸಾಬೀತು ಮಾಡಿದ್ದಾರೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಮೋದಿಯವರೇ ಪ್ರಧಾನಿಯಾಗಬೇಕಿದೆ ಎಂದರು.

     ಈಗಾಗಲೇ ಕರ್ನಾಟಕದ 28 ಕ್ಷೇತ್ರಗಳಿಂದಲೂ ಅಭ್ಯರ್ಥಿಗಳ ಪಟ್ಟಿ ತಯಾರಿಸಿ ನೀಡಲಾಗಿದೆ. ಅದರಲ್ಲಿ ಪಕ್ಷದ ವರಿಷ್ಠರು ಯಾರನ್ನು ಚುನಾವಣೆಗೆ ಸ್ಪರ್ಧೆ ಮಾಡುವಂತೆ ಆದೇಶ ನೀಡುತ್ತಾರೋ ಅವರು ಚುನಾವಣೆ ಎದುರಿಸಲಿದ್ದಾರೆ. ಉಳಿದವರು ಅವರಿಗೆ ಬೆಂಬಲ ನೀಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತಾರೆ ಎಂದರು.

     ಇತ್ತೀಚೆಗೆ ಕಾಂಗ್ರೆಸ್‍ನ ಪ್ರಿಯಾಂಕಗಾಂಧಿಯವರು ಗಂಗಾನದಿಯಲ್ಲಿ ಪ್ರಯಾಣ ಮಾಡುವಾಗ ನೀರು ಸ್ವಚ್ಛವಾಗಿರುವುದನ್ನು ಗಮನಿಸಿದ್ದಾರೆ. ಅಲ್ಲದೆ ಕುಂಭ ಮೇಳದಲ್ಲಿ ಭಾಗವಹಿಸಿದ್ದ ಇಬ್ಬರು ಕಾಂಗ್ರೆಸ್ ಮುಖಂಡರು ಗಂಗಾ ನದಿಯ ಸ್ವಚ್ಛತೆಯ ಮಾಡಿಸಿದ ಮೋದಿಯವರನ್ನು ಹೊಗಳಿದ್ದಾರೆ. ಇಡೀ ಪ್ರಪಂಚದಲ್ಲೇ ಭಾರತ ದೇಶವನ್ನು ಮೊದಲ ಸ್ಥಾನದಲ್ಲಿಡಲು ಮೋದಿಯವರ ಪ್ರಾಮಾಣಿಕ ಪ್ರಯತ್ನ ಹೆಚ್ಚಾಗಿದೆ. ಈಗಾಗಲೇ ಪ್ರಪಂಚದ ಹಲವು ದೇಶಗಳು ಭಾರತದತ್ತ ಮುಖ ಮಾಡುತ್ತಿವೆ ಎಂದು ತಿಳಿಸಿದರು.

    ಬೆಂಗಳೂರು ದಕ್ಷಿಣ ಹಾಗೂ ತುಮಕೂರು ಕ್ಷೇತ್ರಗಳ ಉಸ್ತುವಾರಿ ನನಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಮಾಡುತ್ತಾ, ಕೇಂದ್ರ ಸರ್ಕಾರದ ಯೋಜನೆಗಳು, ದೇಶದ ಅಭಿವೃದ್ಧಿಯ ಕೆಲಸಗಳನ್ನು ಜನರಿಗೆ ತಿಳಿಸುವ ಕಾರ್ಯ ಮಾಡುತ್ತಾ ಬಿಜೆಪಿಗೆ ಗೆಲುವು ತರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಬಿಜೆಪಿ ಪಕ್ಷವು ಸುನಾಮಿಯ ಅಲೆಯಿದ್ದಂತೆ ಅದರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

       ಪತ್ರಿಕಾಗೋಷ್ಠಿಯಲ್ಲಿ ತಿಪಟೂರು ಶಾಸಕ ಬಿ.ಸಿ.ನಾಗೇಶ್, ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜು, ಜಿ.ಪಂ ಉಪಾಧ್ಯಕ್ಷೆ ಶಾರದಾನರಸಿಂಹಮೂರ್ತಿ, ಮುಖಂಡರಾದ ಕುಂದರನಹಳ್ಳಿ ರಮೇಶ್, ಎಂ.ಆರ್.ಹುಲಿನಾಯ್ಕರ್, ಬೆಟ್ಟಸ್ವಾಮಿ, ಬಾವಿಕಟ್ಟೆ ನಾಗಣ್ಣ ಮತ್ತಿತರರು ಉಪಸ್ಥಿತರಿದ್ದರು.

ಮೈತ್ರಿ ಮುಖಂಡಕರು ಭ್ರಮೆಯಲ್ಲಿದ್ದಾರೆ

      ಕಾಂಗ್ರೆಸ್‍ನ ನಾಯಕರು ಹಾಗೂ ಜೆಡಿಎಸ್‍ನ ನಾಯಕರು ಭ್ರಮೆಯಲ್ಲಿದ್ದಾರೆ. ಅವರು ನೀಡುತ್ತಿರುವ ಹೇಳಿಕೆಗಳು ಭ್ರಮೆಯಿಂದಲೇ ಹೇಳುತ್ತಿದ್ದಾರೆ. ತುಮಕೂರಿನಲ್ಲಿ ಜೆಡಿಎಸ್‍ನಿಂದ ದೇವೇಗೌಡರು ಸ್ಪರ್ಧೆ ಮಾಡಿದರೂ ನಮ್ಮ ಜನತೆ ಬಿಜೆಪಿಗೆ ಬೆಂಬಲ ನೀಡುವರಿದ್ದಾರೆ. ಮೈತ್ರಿ ಪಕ್ಷಗಳ ಕುತಂತ್ರಗಳು ಇಲ್ಲಿ ನಡೆಯುವುದಿಲ್ಲ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link