ವಿಜಯಪುರ:
ಕ್ಯಾಂಟರ್ ಹಾಗೂ ಕ್ರೂಸರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ 9 ಮಂದಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರದ ಸಿಂದಗಿ ತಾಲೂಕಿನ ಚಿಕ್ಕಸಿಂಧಗಿ ಗ್ರಾಮದ ಬಳಿ ಈ ಅವಘಡ ಸಂಭವಿಸಿದ್ದು, ಮೃತರನ್ನು ಸಾಗರ್(25), ಚಾಂದಬಾಶಾ(26), ಅಜೀಮ್(25), ಅಂಬರೀಶ್(27), ಶಕೀರ್(28), ಗುರು(32), ಶ್ರೀನಾಥ(ಕ್ರೂಸರ್ ಡ್ರೈವರ್ 30), ಯುನೂಸ್(27), ಮಂಗಸಾಬ್(27) ಎಂದು ಗುರುತಿಸಲಾಗಿದೆ.
ಮೃತರು ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರವರಾಗಿದ್ದು, ಗೋವಾ ಪ್ರವಾಸ ಮುಗಿಸಿಕೊಂಡು ಸಿಂದಗಿ ಮೂಲಕ ಊರಿಗೆ ಮರಳುವ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಿಂದಾಗಿ ಮಲ್ಲಿಕಾರ್ಜುನ, ಮಂಜು ಸದ್ದಾಂ, ಸಾಜೀದ್ ಎಂಬ ಮೂವರಿಗೆ ಗಂಭೀರ ಗಾಯಗಳಾಗಿವೆ. ಕ್ಯಾಂಟರ್ನಲ್ಲಿದ್ದ , ಆರು ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜಕನಕವಾಗಿದೆ.
ಗಾಯಾಳುಗಳನ್ನು ಸಿಂದಗಿ ಹಾಗೂ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಸಿಂದಗಿ ಪೊಲೀಸರು ರಸ್ತೆ ಸಂಚಾರಕ್ಕೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ