ಸಾಗರ: 
ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಡಾಂಬಾರು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಇಲ್ಲಿನ ಕಾಸ್ಪಾಡಿ ಬಳಿ ನಡೆದಿದೆ.
ಸಾಗರ ಕಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಶಿವಮೊಗ್ಗದ ಕಡೆಗೆ ಸಂಚರಿಸುತ್ತಿದ್ದ ಡಾಂಬಾರು ತುಂಬಿದ ಲಾರಿ ಮುಖಾಮುಖಿ ಢಿಕ್ಕಿಯಾಗಿವೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಲಾರಿ ಚಾಲಕ ಕುಶಾಲನಗರ ನಿವಾಸಿ ಸಚಿನ್, ಕ್ಲೀನರ್ ತಾಳಿಕೋಟೆ ತಾಲೂಕಿನ ಮಲಕಪ್ಪ ಮತ್ತು ಟ್ಯಾಂಕರ್ ಚಾಲಕ ಲೋಕೇಶ್ ಎಂದು ಗುರುತಿಸಲಾಗಿದೆ. ಉಮೇಶ್ ಎಂಬವರು ಗಂಭೀರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.
ಅತಿಯಾದ ವೇಗ ಮತ್ತು ನಿದ್ದೆಯ ಮಂಪರು ಅಪಾಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








