ನವದೆಹಲಿ:

ಪಾಕ್ ಮತ್ತು ಭಾರತದ ನಡುವೆ ಇರುವ ಎಲ್ ಓ ಸಿ ಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಸೈನಿಕರ ಮೇಲೆ ಭಾರತೀಯ ಯೋಧರು ಪ್ರತಿದಾಳಿ ನಡೆಸಿ ಸುಮಾರು 12 ಮಂದಿ ಪಾಕ್ ಸೈನಿಕರು ಮೃತಪಟ್ಟಿದ್ದಾರೆ.
ಕಾಶ್ಮೀರದ ಸುಂದರ್ ಬನಿ ವಲಯದಲ್ಲಿ ಗುರುವಾರ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಪಾಕ್ ನ ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ 12 ಸೈನಿಕರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ 22 ಜನ ಪಾಕ್ ಯೋಧರು ಗಂಭೀರವಾಗಿ ಗಯಗೊಂಡಿದ್ದಾರೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








