ಬೆಂಗಳೂರು
ನಾನು ತುಮಕೂರು ಕ್ಷೇತ್ರದಿಂದಲ್ಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠರಾದ ಶ್ರೀ ಎಚ್ ಡಿ ದೇವೇಗೌಡರ ಅವರು ಇಷ್ಟು ದಿನ ಎದ್ದಿದ್ದ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ತುಮಕೂರು ಕ್ಷೇತ್ರ ತಮಗೇ ಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿತ್ತು ಆದರೆ ಕಾಂಗ್ರೆಸ್‌ಗೆ ಅದರಲ್ಲೂ ಉಪಮುಖ್ಯಮಂತ್ರಿ ಜಿ ಪರಮೇಶ್ವರ್‌ಗೆ ತುಮಕೂರು ಕ್ಷೇತ್ರವನ್ನು ಬಿಟ್ಟುಕೊಡಲು ಮನಸ್ಸಿರಲಿಲ್ಲ. ಬಳಿಕ ದೇವೇಗೌಡರೇ ಸ್ವತಃ ಸ್ಪರ್ಧಿಸುವುದಾದರೆ ಬಿಟ್ಟುಕೊಡುತ್ತೇನೆ ಎಂದು ಹೇಳಿದ್ದರು.
ಇಷ್ಟಾದರೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವವರೆಗೂ ಗೊಂದಲವಿತ್ತು. ಅದಾದ ಬಳಿಕ ಈಗ ದೇವೇಗೌಡರೇ ಸ್ವತಃ ಹೇಳಿಕೆ ನೀಡಿದ್ದು, ತಾವು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಹಾಗೂ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ.