ಹುಬ್ಬಳ್ಳಿ
ಹೃದಯಾಘಾತದಿಂದ ನಿಧನರಾದ ಸಚಿವ ಸಿ.ಎಸ್. ಶಿವಳ್ಳಿ ಅವರ ಎರಡನೆಯ ಮಗಳಾದ ರೂಪಾ, ತಂದೆಯ ಅಗಲಿಕೆಯ ದುಃಖದ ನಡುವೆಯೇ ಕಣ್ಣೀರಿಡುತ್ತಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಕೆಎಲ್ಇ ಕಾಲೇಜಿನಲ್ಲಿ 10ನೇ ತರಗತಿ ಓದುತ್ತಿದ್ದಾರೆ.
ತಂದೆ ಸಾವಿನ ದುಃಖ ಅತೀವ ನೋವು ಉಂಟುಮಾಡುತ್ತಿದ್ದರೂ, ಶಿಕ್ಷಣಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕಾಗಿ ಅವರು ಅಳುತ್ತಲೇ ಪರೀಕ್ಷೆ ಬರೆದಿದ್ದಾರೆ. ಇಲ್ಲಿನ ಸೇಂಟ್ ಆಂಟೋನಿ ಶಾಲೆಯಲ್ಲಿ ಹತ್ತನೇ ತರಗತಿಯ ಸಿಬಿಎಸ್ಇ ಇಂಗ್ಲಿಷ್ ಭಾಷೆಯ ಪರೀಕ್ಷೆಯನ್ನು ಬರೆದರು. ಪರೀಕ್ಷೆ ಮುಗಿಸಿ ಬಳಿಕ ಅವರು ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








