ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ಬೈಕ್ RALLY ಮೂಲಕ ಮತದಾರ ಜಾಗೃತಿ.

ಚಳ್ಳಕೆರೆ

         ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲ್ಲೂಕು ಚುನಾವಣಾ ಸ್ವೀಫ್ ಸಮಿತಿ ಮತದಾರ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಂತ ಹಂತವಾಗಿ ನಡೆಸುವ ಮೂಲಕ ಪ್ರತಿಯೊಬ್ಬ ಮತದಾರನು ಏ.18ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ತಪ್ಪದೆ ಪಾಲ್ಗೊಳ್ಳುವಂತೆ ಕ್ಷೇತ್ರದ ಎಲ್ಲಾ ಮತದಾರರಲ್ಲಿ ಅಭಿಯಾನದ ಮೂಲಕ ಜಾಗೃತಿಗೊಳಿಸಲಾಗುತ್ತಿದೆ ಎಂದು ತಾಲ್ಲೂಕು ಸ್ವೀಫ್ ಸಮಿತಿ ನಿರ್ದೇಶಕ, ಪೌರಾಯುಕ್ತ ಜೆ.ಟಿ.ಹನುಮಂತರಾಜು ತಿಳಿಸಿದರು.

          ಅವರು, ಶನಿವಾರ ನಗರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಮತದಾನ ಜಾಗೃತಿ ಅಂಗವಾಗಿ ನಗರಸಭೆ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಪತಂಜಲಿ ಯೋಗ ಶಿಕ್ಷಣ ಸಮಿತಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು. ಚುನಾವಣಾ ಆಯೋಗದ ಸೂಚನೆಯಂತೆ ಸ್ವೀಫ್ ಸಮಿತಿ ಇನ್ನೂ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ ಎಂದರು.

           ತಾಲ್ಲೂಕು ಸ್ವೀಫ್ ಸಮಿತಿ ಅಧ್ಯಕ್ಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಎಲ್.ಈಶ್ವರಪ್ರಸಾದ್ ಮಾತನಾಡಿ, ಚುನಾವಣೆಗೆ ಇನ್ನೂ ಕೇವಲ 26 ದಿನಗಳು ಮಾತ್ರ ಉಳಿದಿದ್ದು, ಈಗಾಗಲೇ ತಾಲ್ಲೂಕು ಸ್ವೀಫ್ ಸಮಿತಿ ಸಹಯೋಗದಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಮೂಲಭೂತ ಕರ್ತವ್ಯವಾಗಿದ್ದು, ಈ ಕರ್ತವ್ಯವನ್ನು ಮತದಾರ ತಪ್ಪದೆ ಪಾಲಿಸಬೇಕೆಂದರು.ಕಾರ್ಯಕ್ರಮದಲ್ಲಿ ಪತಂಜಲಿಯೋಗ ಶಿಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಯೋಗ ಗುರು ಮನೋಹರ, ಪ್ರಚಾರ ಸಮಿತಿ ನಿರ್ದೇಶಕ ಸಿ.ತಿಪ್ಪೇಸ್ವಾಮಿ, ಕೆ.ಆರ್.ತಿಪ್ಪೇಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap