ಪ್ರತಿಯೊಬ್ಬ ಮತದಾರನು ಮತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಸಮರ್ಥ ನಾಯಕನ ಆಯ್ಕೆಗೆ ಸಹಕರಿಸಿ. 

ಚಳ್ಳಕೆರೆ
 
      ರಾಷ್ಟ್ರದ ನಮ್ಮ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ನೀಡಿದೆ. 18 ವರ್ಷ ತುಂಬಿದ ಯಾವುದೇ ಯುವಕ, ಯುವತಿಯರು ಮತದಾನ ಮಾಡಲು ಆರ್ಹರಿದ್ದು, ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ದೇಶಕ್ಕೆ ಸಮರ್ಥ ನಾಯಕತ್ವವನ್ನು ನೀಡುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಿದೆ. ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಜಾಥ ಮೂಲಕ ಜಾಗೃತಗೊಳಿಸಲಾಗುತ್ತಿದೆ ಎಂದು ಆದರ್ಶ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ್ ತಿಳಿಸಿದರು. 
 
        ಅವರು, ಶನಿವಾರ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾನ ವಿಧಿಯನ್ನು ಸಹ ಬೋಧಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಅಭಿಯಾನವನ್ನು ಯಶಸ್ಸಿಯಾಗಿ ನಡೆಸಿದರು. 
        ಈ ಸಂದರ್ಭದಲ್ಲಿ ಶಿಕ್ಷಕರಾದ ಎಲ್.ರುದ್ರಮುನಿ, ವೀರಭದ್ರಪ್ಪ, ಶಾಹೀನಾಭಾನು, ಸುಮೀತಕೌಶರ್, ಎಸ್.ಪಾವನ, ರಾಜು ರಾಥೋಡ್, ಶಾಂತಕುಮಾರ್, ಬೊಮ್ಮಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link