ನವದೆಹಲಿ
ಲೋಕಪಾಲ ಅಧ್ಯಕ್ಷರಾಗಿ ನ್ಯಾಯಮೂರ್ತಿ ಪಿನಾಕಿ ಚಂದ್ರಘೋಷ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿಂದು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಘೋಷ್ ಅವರನ್ನು ದೇಶದ ಚೊಚ್ಚಲ ಲೋಕಪಾಲರಾಗಿ ಮಾರ್ಚ್ 19 ರಂದು ನೇಮಕ ಮಾಡಲಾಗಿತ್ತು. ರಾಷ್ಟ್ರಪತಿ ಅವರು ಲೋಕಪಾಲ ಸಂಸ್ಥೆಗೆ ನ್ಯಾಯಾಂಗ ಕ್ಷೇತ್ರದ ನಾಲ್ವರು ಹಾಗೂ ಇತರೆ ಕ್ಷೇತ್ರಗಳ ನಾಲ್ವರು ಸದಸ್ಯರನ್ನು ನೇಮಕ ಮಾಡಿದ್ದಾರೆ.
ನ್ಯಾಯಾಂಗ ಕ್ಷೇತ್ರದ ಸದಸ್ಯರಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ದಿಲಿಪ್ ಬಿ. ಭೋಸಲೆ, ಪ್ರದೀಪ್ ಕುಮಾರ್ ಮೊಹಂತಿ, ಅಭಿಲಾಷ ಕುಮಾರಿ ಮತ್ತು ಛತ್ತೀಸ್‍ಗಢ ಹೈಕೋರ್ಟ್‍ನ ಹಾಲಿ ಮುಖ್ಯನ್ಯಾಯಮೂರ್ತಿ ಅಜಯ್ ಕುಮಾರ್ ತ್ರಿಪಾಠಿ ನೇಮಕವಾಗಿದ್ದಾರೆ.
ಸಶಸ್ತ್ರ ಸೀಮಾಬಲದ ಮೊದಲ ಮಹಿಳಾ ಮಾಜಿ ಮುಖ್ಯಸ್ಥೆ ಅರ್ಚನಾ ರಾಮಸುಂದರಂ, ಮಹಾರಾಷ್ಟ್ರದ ಮಾಜಿ ಮುಖ್ಯ ಕಾರ್ಯದರ್ಶಿ ದಿನೇಶ್ ಕುಮಾರ್ ಜೈನ್, ಮಾಜಿ ಐಆರ್‍ಎಸ್ ಅಧಿಕಾರಿ ಮಹೇಂದ್ರ ಸಿಂಗ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಇಂದ್ರಜಿತ್ ಪ್ರಸಾದ್ ಗೌತಮ್ ನೇಮಕವಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








