ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ..!!

ಬೆಂಗಳೂರು :

     ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಜಕೀಯ ಚಟುವಟಿಕೆಗಳು ಕಾವೇರಿವೆ. ಬರುವ ತಿಂಗಳ ೧೧ ರಂದು ದೇಶದ ೨೦ಕ್ಕೂ ಹೆಚ್ಚು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು ೯೧ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.

     ಒಟ್ಟು ೫೪೩ ಲೋಕಸಭಾ ಕ್ಷೇತ್ರಗಳ ಪೈಕಿ ಇದುವರೆಗೆ ೨೮೬ ಕ್ಷೇತ್ರಗಳಿಗೆ ಬಿಜೆಪಿ ನಿನ್ನೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಿದೆ. ಹಾಲಿ ಸಂಸದ ಅನುರಾಗ್ ಠಾಕೂರ್ ಹಿಮಾಚಲ ಪ್ರದೇಶದ ಹಮೀರ್ ಪುರ್ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಪಕ್ಷದ ಹಿರಿಯ ನಾಯಕ ಶಾಂತಕುಮಾರ್ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ.ತೆಲಂಗಾಣದ ೬ ಕ್ಷೇತ್ರಗಳಿಗೆ, ಉತ್ತರ ಪ್ರದೇಶದ ೩ ಕ್ಷೇತ್ರಗಳಿಗೆ ಹಾಗೂ ಕೇರಳ ,ಯಗಯಿಪಶ್ಚಿಮ ಬಂಗಾಳದ ತಲಾ ಒಂದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ .

       ಬಿಹಾರದಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು, ಜೆಡಿಯು ಹಾಗೂ ಎಲ್‌ಜೆಪಿ ೩೯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿವೆ. ಹಾಲಿ ಸಂಸದ ಹುಕುಂ ಡಿಯೋ ನಾರಾಯಣ್ ಯಾದವ್ ಸೇರಿದಂತೆ ೭ ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಪಾಟ್ನಾದಲ್ಲಿ ನಿನ್ನೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೆಸರನ್ನು ಪಾಟ್ನಾ ಸಾಹಿಬ್ ಕ್ಷೇತ್ರಕ್ಕೆ ಸೂಚಿಸಲಾಗಿದ್ದು, ಈ ಕ್ಷೇತ್ರದಿಂದ ಶತೃಘ್ನ ಸಿನ್ಹಾ ಅವರನ್ನು ಬದಲಿಸಲಾಗಿದೆ. ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ನಾವಡಾ ಕ್ಷೇತ್ರದ ಬದಲಾಗಿ ಬೇಗುಸರಾಯ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

       ಪಶ್ಚಿಮ ಚಂಪಾರಣ್‌ನಿಂದ ಕೇಂದ್ರ ಸಚಿವರಾದ ರಾಧಾಮೋಹನ್ ಸಿಂಗ್ ಹಾಗೂ ಪಾಟಲಿಪುತ್ರ ಕ್ಷೇತ್ರದಿಂದ ರಾಮ್ ಕೃಪಾಲ್ ಯಾದವ್ ಕಣಕ್ಕಿಳಿಯಲಿದ್ದಾರೆ. ರಾಜ್ಯದಲ್ಲಿ ಸ್ಥಾನ ಹಂಚಿಕೆಯಲ್ಲಿ ಸಿಪಿಐ ಎಂಎಲ್ ಅನ್ನು ಕಡೆಗಣಿಸಿದ್ದಕ್ಕೆ ಮೈತ್ರಿಕೂಟದಲ್ಲಿ ಅಸಮಾಧಾನ ಉಂಟಾಗಿದೆ.ಅರ ಸಿವಾನ್, ಕಾರಕಟ್ ಹಾಗೂ ಜೆಹನಾಬಾದ್ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಸಿಪಿಐ ಎಂಲ್ ಹೇಳಿದೆ. ಬೇಗುಸರಾಯ್ ಕ್ಷೇತ್ರದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಹಾಗೂ ಸಂಘದ ಅಧ್ಯಕ್ಷ ಕನ್ನಯ್ಯಕುಮಾರ್ ಅವರನ್ನು ಕಣಕ್ಕಿಳಿಸುವುದಾಗಿ ಸಿಪಿಐ ಹೇಳಿದೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಒಟ್ಟು ೨೧೮ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

        ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಭೂಪಾಲ್‌ನಿಂದ ಸ್ಪರ್ಧಿಸಲಿದ್ದರೆ, ಮಹಾರಾಷ್ಟ್ರದ ನಾಂದೇಡ್‌ನಿಂದ ಅಶೋಕ್ ಚೌವಾಣ್ ಕಣಕ್ಕಿಳಿಯಲಿದ್ದಾರೆ. ಇನ್ನು ಕರ್ನಾಟಕದ ಕಲಬುರಗಿ ಕ್ಷೇತ್ರದಿಂದ ಮಲ್ಲಿಕಾರ್ಜುನ್ ಖರ್ಗೆ ಮತ್ತೊಮ್ಮೆ ಅಭ್ಯರ್ಥಿಯಾಗಿದ್ದರೆ, ಉತ್ತರಾಖಂಡ್‌ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ನೈನಿತಾಲ್‌ನಿಂದ ಹಾಗೂ ಬಿ.ಸಿ. ಖಂಡೂರಿ ಪುತ್ರ ಮನೀಷ್ ಖಂಡೂರಿ ಅವರು ಉತ್ತರಾಖಂಡ್‌ನ ಗರ್ವಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

         ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್‌ಸಿಪಿ ಸೀಟು ಹಂಚಿಕೆ ಮಾಡಿಕೊಂಡಿದ್ದು, ಕಾಂಗ್ರೆಸ್ ೨೬ ಸ್ಥಾನಗಳಲ್ಲಿ ಹಾಗೂ ಎನ್‌ಸಿಪಿ ೨೨ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಕರ್ನಾಟಕದ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಜೆಡಿಎಸ್‌ನ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರು, ಸ್ಪರ್ಧೆಗಿಳಿಯಲಿದ್ದಾರೆ. ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಅವರು ಅನಂತನಾಗ್ ಕ್ಷೇತ್ರದಿಂದ ಸ್ಪರ್ಧಿಸುವರು. ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ೭ ಹಂತಗಳಲ್ಲಿ ನಡೆಯಲಿದೆ. ಮೇ-೧೯ ರಂದು ಅಂತಿಮ ಹಂತದ ಚುನಾವಣೆ ನಡೆಯಲಿದ್ದು, ಮೇ-೨೩ ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link