ದಾವಣಗೆರೆ
ಶ್ರೀಧರ್ಮಸ್ಥಳದ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಇನ್ಸೇನಿಯಾ ಟೆಕ್ ಕಲ್ಚರ್-2019 ರಾಷ್ಟ್ರೀಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ದಾವಣಗೆರೆ ಮೂಲದ ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದಲ್ಲಿ 2ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರುವ ಸೌಭಾಗ್ಯ ಬೀಳಗಿಮಠ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಸೌಭಾಗ್ಯ ಬೀಳಗಿಮಠ್ ಅವರು ನಗರದ ಸಿದ್ಧಗಂಗಾ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪಿಯುಸಿ ವ್ಯಾಸಂಗ ಮಾಡಿದ್ದು, ನಗರದ ಎಜು ಏಷ್ಯಾ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
