ತುಮಕೂರು :
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ಹಾಗು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಯ ಬಳಿಕ ನಾಮಪತ್ರ ದೇವೇಗೌಡರು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಮೈತ್ರಿ ಪಕ್ಷದ ನಿರ್ಧಾರಕ್ಕೆ ಬಂಡಾಯ ಎದ್ದಿರುವ ಮುದ್ದಹನುಮೇಗೌಡ ಕೂಡ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗರೇಲಿದ್ದು, ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಬ್ಬರಿಗೂ ಪ್ರತ್ಯೇಕ ಮಾರ್ಗವನ್ನು ಪೊಲೀಸ್ ಇಲಾಖೆ ರೂಪಿಸಿದೆ.
ಮುದ್ದಹನುಮೇಗೌಡರಿಗೆ ಬಿ.ಜಿ.ಎಸ್. ವೃತ್ತ ಅಶೋಕ ರಸ್ತೆ ಕೋಡಿ ವೃತ್ತದವರೆಗೆ ಅನುಮತಿ ನೀಡಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯವರೆಗೆ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
