ದೆಹಲಿ:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದರೆ ವಾರ್ಷಿಕ 72 ಸಾವಿರ ರೂಪಾಯಿಗಳನ್ನು ಅವರ ಅಕೌಂಟಿಗೆ ಜಮಾ ಮಾಡುವ ಆಶ್ವಾಸನೆಯೊಂದನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕೊಟ್ಟಿದ್ದಾರೆ.
ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಶೇ 20ರಷ್ಟು ಕಡು ಬಡ ಕುಟುಂಬಗಳಿಗೆ ಕನಿಷ್ಠ ಆದಾಯ ಖಾತ್ರಿ ಯೋಜನೆಯಡಿ ವಾರ್ಷಿಕ 72,000 ರೂ ಒದಗಿಸುವುದಾಗಿ ಆಶ್ವಾಸನೆ ನೀಡುವ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಗಾ ಅವರು ದೇಶದ ಬಡವರ್ಗದ ಮತದಾರರನ್ನು ಓಲೈಸುವ ಕಾರ್ಯತಂತ್ರಕ್ಕೆ ಕೈ ಹಾಕಿದ್ದಾರೆ.
ಈ ದೇಶದ ಬಡವರ ಕುರಿತಾಗಿ ನಮ್ಮ ಪಕ್ಷಕ್ಕೆ ಅತೀವ ಕಾಳಜಿ ಇದ್ದು ಅವರ ಸಮಸ್ಯೆಗಳನ್ನು ನಿವಾರಿಸಲು ನಾವು ಬಹುವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ’ ಎಂದು ಅವರು ಹೇಳಿದರು. ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಮಾಸಿಕ ತಲಾ 12,000 ರೂ.ಗಳ ಮೂಲ ಕನಿಷ್ಠ ಆದಾಯವನ್ನು ಖಾತ್ರಿಪಡಿಸುವುದಾಗಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ