ಬೆಂಗಳೂರು:
ಜೆಡಿಎಸ್ ತನ್ನ ಪಾಲಿನ ಕ್ಷೇತ್ರವಾದ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟ ಬಳಿಕ ಕಾಂಗ್ರೆಸ್ ಪಕ್ಷದ ಕೃಷ್ಣ ಭೈರೇಗೌಡ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.ಸಚಿವ ಕೃಷ್ಣ ಭೈರೇಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೃಷ್ಣ ಭೈರೇಗೌಡ ಹೆಸರು ಅಂತಿಮಗೊಂಡಿದೆ. ಬೆಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ಕಣದಲ್ಲಿದ್ದಾರೆ.