ಉಡುಪಿ:
ಚಿಕ್ಕಮಗಳೂರು -ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.
ಈಗಾಗಲೇ ಉಡುಪಿ ತಲುಪಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಪಡೆದರು.ನಂತರ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ನಡೆಯುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಬಳಿಕ, ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ