ಸುಕ್ಮಾ:
ಸುಕ್ಮಾ ಜಿಲ್ಲೆಯಲ್ಲಿ ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಂತಾಲ್ನಾರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು ಈ ದಾಳಿಯಲ್ಲಿ ನಾಲ್ವರು ನಕ್ಸಲರು ಮೃತರಾಗಿದ್ದಾರೆ ಎಂದು ಉಪ ಪೊಲೀಸ್ ಮಹಾನಿರ್ದೇಶಕ ಪಿ. ಸುಂದರ್ ರಾಜ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ರಾಜಧಾನಿಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ಕರ್ಕಾಂಗುಡಾ ಹಳ್ಳಿಯಲ್ಲಿ ಸಿಆರ್ ಪಿಎಫ್ ಕಮಾಂಡೋ ಬೆಟಲಿಯನ್ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ ಆಗ ಪ್ರತಿದಾಳಿ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








