ದಾವಣಗೆರೆ:
ನಗರದ ಹೊರವಲಯದಲ್ಲಿರುವ ಕರೂರು ಕೈಗಾರಿಕಾ ಪ್ರದೇಶದ ಶ್ರೀವಿಘ್ನೇಶ್ವರ ಸೋಪ್ ಇಂಡಸ್ಟ್ರಿಯಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಸೋಪ್ ಇಂಡಸ್ಟ್ರಿಯಲ್ಲಿ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ದಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
