ಬೆಂಗಳೂರು:
ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಈ ತಿಂಗಳ 29 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ಉಮೇದುವಾರಿಕೆ ಹಿಂಪಡೆದ ನಂತರವಷ್ಟೇ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ದೇಶದಲ್ಲಿ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್ 18ರಂದು ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು-ಕೊಡಗು, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಚಿತ್ರದುರ್ಗ, ಹಾಸನ, ತುಮಕೂರು ಮತ್ತು ಉಡುಪಿ-ಚಿಕ್ಕಮಗಳೂರು ಸೇರಿವೆ. ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಂತರ, ಮೇ 23ರಂದು ಎಲ್ಲ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








